ಬೆಳಗಾವಿ: ತೆಲಂಗಾಣ ಚುನಾವಣೆಗೆ ಮತದಾರರ ಮನ ಗೆಲ್ಲಲ್ಲು ಹಣ, ಸೀರೆ, ಮದ್ಯ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಬೆಳಗಾವಿಯಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ತೆಲಂಗಾಣ ಚುನಾವಣೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎನ್ನಲಾಗಿದ್ದು ಲಾರಿ ಸಮೇತ 44 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು ಚಾಲಕ ಪರಾರಿಯಾಗಿದ್ದಾನೆನ್ನಲಾಗಿದೆ. 21 ವಿವಿಧ ದುಬಾರಿ ಬ್ಯಾಂಡ್‍ನ 250 ಬಾಕ್ಸ್ ಮದ್ಯ ವಶಕ್ಕೆ ಪಡೆಯಲಾಗಿದೆ. 44 ಲಕ್ಷ ಮೌಲ್ಯದ ಗೋವಾ ಮದ್ಯ 20 ಲಕ್ಷ ಮೌಲ್ಯದ ಲಾರಿ ಸೇರಿ ಒಟ್ಟು 63 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.