ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋμï ಅವರನ್ನು ಬಿಗ್ ಬಾಸ್ ಮನೆಯಿಂದಲೇ ವಶಕ್ಕೆ ಪಡೆಯಲಾಗಿದೆ.ಹುಲಿ ಉಗುರಿನ ಡಾಲರ್ ಧರಿಸಿದ್ದ ಆರೋಪದ ಮೇಲೆ ಅವರನ್ನು ಅರಣ್ಯಾಧಿಕಾರಿಗಳು ತಡರಾತ್ರಿ ಅರೆಸ್ಟ್ ಮಾಡಿದ್ದಾರೆ.
ಭಾನುವಾರ ರಾತ್ರಿ ಸಂತೋಷ ಅವರನ್ನು ವಶಕ್ಕೆ ಪಡೆದಿದ್ದು, ಸದ್ಯ ಅವರು ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬಂಧನ: ಹುಲಿಯ ಉಗುರಿನ ಡಾಲರ್ ಅನ್ನು ಕೊರಳಿಗೆ ಧರಿಸಿರುವ ಸಂತೋಷ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಡಾಲರ್ ಜಪ್ತಿ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಡಾಲರ್ ನಲ್ಲಿ ಬಳಸಿರುವುದು ಹುಲಿ ಉಗುರು ಎಂಬುದು ಸಾಬೀತಾಗಿದೆ ಎಂದು ತಿಳಿದು ಬಂದಿದೆ.