ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಈ ಇವೆಂಟ್ ಮ್ಯಾನೇಜೆಂಟ್ ಗಾಯತ್ರಿ ವಿಹಾರದಲ್ಲಿರುವ ಶಾರದಾ ಕೇಟರರರ್ಸ್‍ಗೆ ಊಟ ಸರಬರಾಜು ವಹಿಸಲಾಗಿತ್ತು. ಆದರೆ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿತ್ತು.