• Tue. Nov 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ByKiran Poojary

Oct 24, 2023

ಬೆಳ್ತಂಗಡಿ, ಅ 24 : ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ. ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಘಟನೆಗೆ ಬಗ್ಗೆ ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‍ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *