ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ
ಕರ್ನಾಟಕದ ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ರಾಜ್ಯ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ರಾಜ್ಯದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಎಲ್ಲಾ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಸುಧಾಕರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಎಲ್ಲಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.ಎಲ್ಲಾ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಸುದ್ದಿ ಸಂಸ್ಥೆ ಪಿಟಿಐ ಪ್ರಕಟಿಸಿರುವ ವರದಿ ಪ್ರಕಾರ, ಕರ್ನಾಟಕದಲ್ಲಿ ಶಾಲಾ ಕಾಲೇಜು ಪರೀಕ್ಷೆಗಳಲ್ಲಿ ಮಾತ್ರವಲ್ಲದೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಮಹಿಳೆಯರು ಹಿಜಾಬ್ ಧರಿಸಿ ನೀಟ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಈಗಾಗಲೇ ಅನುಮತಿ ನೀಡಿದ್ದು, ಕಾಂಗ್ರೆಸ್ ಸರ್ಕಾರದ ನಿರ್ಧಾರ ಯಾವುದೇ ರೀತಿಯಲ್ಲೂ ತಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಹಿಂದೂ ಸಂಘಟನೆಗಳ ಪ್ರತಿಭಟನೆ ಘೋಷಣೆ ಇನ್ನೊಂದೆಡೆ ಸರ್ಕಾರದ ಈ ನಿರ್ಧಾರದ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಘೋಷಿಸಿವೆ. ಕಳೆದ ವರ್ಷ ಜನವರಿಯಲ್ಲಿ ಉಡುಪಿ ಜಿಲ್ಲೆಯ ಸರಕಾರಿ ಪ್ರೌಢಶಾಲೆಯಲ್ಲಿ ಹಿಜಾಬ್ ಧರಿಸಿ ಆರು ವಿದ್ಯಾರ್ಥಿನಿಯರನ್ನು ಶಾಲೆಗೆ ಬರದಂತೆ ತಡೆದಿರುವುದು ಇಲ್ಲಿ ಗಮನಾರ್ಹ.
ಕಳೆದ ವರ್ಷ ಹಿಜಾಬ್ ಭಾರಿ ವಿವಾದಕ್ಕೆ ಕಾರಣವಾಗಿತ್ತು ಉಡುಪಿ ಶಾಲೆಯಲ್ಲಿ ನಡೆದ ಘಟನೆಯ ಬಳಿಕ ಕರ್ನಾಟಕದಲ್ಲಿ ಹಿಜಾಬ್ ಬಗ್ಗೆ, ದೊಡ್ಡ ವಿವಾದ ಉದ್ಭವಿಸಿತ್ತು ಮತ್ತು ಕರ್ನಾಟಕ ಸರ್ಕಾರವು ಶಾಲೆಗಳಲ್ಲಿ ಹುಡುಗಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು. ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು ಮತ್ತು ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು, ಪಕರಣ ಆಲಿಸಿದ ನ್ಯಾಯಾಲಯವು ತರಗತಿಯೊಳಗೆ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಅರ್ಜಿಗಳನ್ನು ತಿರಸ್ಕರಿಸಿತ್ತು. ಇದಾದ ಬಳಿಕ ಪುಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
Notice: Undefined variable: post in /home/hosakira/public_html/wp-content/themes/newses/inc/ansar/hooks/hook-single-page.php on line 180