ಕೋಟ; ಇಲ್ಲಿನ ಕೋಡಿ ಗ್ರಾಮಪಂಚಾಯತ್ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ ಆಯ್ಕೆಯಾದರೆ ಉಪಾಧ್ಯಕ್ಷರಾಗಿ ಪ್ರಸಾದ್ ಬೇಂಗ್ರೆ ಅವಿರೋಧವಾಗಿ ಆಯ್ಕೆಯಾದರು.ಒಟ್ಟು 12ರ ಸದಸ್ಯರ ಬಲದ ಪಂಚಾಯತ್‍ನಲ್ಲಿ ಬಿಜೆಪಿ 11-1 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಈ ಪ್ರಕ್ರಿಯೆಯೊಳಗೆ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಪ್ರಸ್ತುತ ಅಧ್ಯಕ್ಷ ಪ್ರಭಾಕರ್ ಮೆಂಡನ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಚುನಾವಣಾಧಿಕಾರಿಯಾಗಿ ರಾಘವ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಭಾಗವಹಿಸಿದ್ದರು.
ಇಲ್ಲಿನ ಕೋಡಿ ಗ್ರಾಮಪಂಚಾಯತ್ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು.