ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಗೀತಾ ಖಾರ್ವಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರವೀಂದ್ರ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕನ್ನಡ ಭಾಷೆ ಹಾಗೂ ತಾಯ್ನಾಡಿನ ಬಗ್ಗೆ ಮಹತ್ವವನ್ನು ಸಭೆಯಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಕೆ. ಪ್ರಭಾಕರ ಮೆಂಡನ್ , ಊರಿನ ಮಹನೀಯರು ರಾಘವೇಂದ್ರ ಕರ್ಕೇರಾ, ರಾಘವೇಂದ್ರ ಸುವರ್ಣ ಅಂಗನವಾಡಿ ಕಾರ್ಯಕರ್ತೆ ಲೀಲಾವತಿ , ಮಹಿಳೆಯರು, ಮಕ್ಕಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.