
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‍ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾದ ಹೆಚ್.ವಿ. ಇಬ್ರಾಹಿಂಪುರ್ ಅವರು ಉದ್ಯೋಗ ಖಾತರಿ ಯೋಜನೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಮನೆ ಮನೆಗೆ ತೆರಳಿ ಉದ್ಯೋಗ ಖಾತ್ರಿ ಯೋಜನೆಯ ಮಾಹಿತಿ ಕರ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ವಿದ್ಯಾ ಪಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್‍ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾದ ಹೆಚ್.ವಿ. ಇಬ್ರಾಹಿಂಪುರ್, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ ಇದ್ದರು.
Leave a Reply