
ಕೋಟ: ಉಡುಪಿಯ ಅನಂತಚೇತನ ಚಾರಿಟೇಬಲ್ ಟ್ರಸ್ಟ್‍ನ ಈ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಕೋಟ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿವೇಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಮದೇವ ಐತಾಳ್ ಟ್ರಸ್ಟ್‍ನ ಸೇವಾ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಮಾತನಾಡಿ ದಾನಿಗಳು ನೀಡುವ ಆರ್ಥಿಕ ಸಹಾಯವನ್ನು ಸದಾ ಸ್ಮರಿಸುತ್ತಾ ಸಮಾಜದಲ್ಲಿ ಸತ್ಫ್ರಜೆಯಾಗಿ ಬಾಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪ್ರಾಸ್ತಾವಿಕ ನುಡಿಗೈದ ಟ್ರಸ್ಟ್‍ನ ಅಧ್ಯಕ್ಷ ರಾಮಕೃಷ್ಣ ಮಯ್ಯ ಈ ಸಾಲಿನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನಕ್ಕಾಗಿ ರೂ 2 ಲಕ್ಷ ಮೊತ್ತವನ್ನು ಮೀಸಲಿಡಲಾಗಿದೆ ಎಂದರು.
ಕೋಟ ವಿವೇಕ ಪ.ಪೂ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ಹೇರಳೆ,ಟ್ರಸ್ಟ್ ಪದಾಧಿಕಾರಿಗಳಾದ ಸಿ.ವಿ ಉರಾಳ್, ಮೋಹನ ಮಯ್ಯ ಮುಂತಾದವರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಟ್ರಸ್ಟ್ ನ ಸದಸ್ಯರಾದ ವಿಶ್ವನಾಥ ಬಾಯರಿ ಸ್ವಾಗತಿಸಿದರು.ಡಾ ಗೀತಾ ಮಯ್ಯ ಫಲಾನುಭವಿಗಳ ಪಟ್ಟಿ ವಾಚಿಸಿದರು.ಜೆ ಪಿ ಅಡಿಗ ವಂದಿಸಿದರು.ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.
ಉಡುಪಿಯ ಅನಂತಚೇತನ ಚಾರಿಟೇಬಲ್ ಟ್ರಸ್ಟ್‍ನ ಈ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕೋಟ ವಿವೇಕ ಪ.ಪೂ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ಹೇರಳೆ,ಟ್ರಸ್ಟ್ ಪದಾಧಿಕಾರಿಗಳಾದ ಸಿ.ವಿ ಉರಾಳ್ ಮತ್ತಿತರರು ಇದ್ದರು.
Leave a Reply