• Tue. Nov 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕ ಸಾ ಪ ದಿಂದ ದತ್ತಿ ಉಪನ್ಯಾಸ

ByKiran Poojary

Nov 8, 2023

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು
ಉಡುಪಿ ತಾಲೂಕು ಘಟಕ, ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ದಿ | ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11ನೇ ತಾರೀಕು ಶನಿವಾರ 10.30ಕ್ಕೆ ಡಾಕ್ಟರ್ ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನಲ್ಲಿ ನಡೆಸಲಾಗುವುದು. ಉಪನ್ಯಾಸವನ್ನು ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ನೀಡಲಿದ್ದಾರೆ ಹಾಗೂ ಇದೇ ಸಂದರ್ಭದಲ್ಲಿ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ನಿರುಪಮಾ ಪ್ರಮೋದ್ ತಂತ್ರಿಯವರನ್ನು ಗೌರವಿಸಲಾಗುವುದು ಎಂದು ಕ ಸಾ ಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *