ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಬಂಕೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಪುಟಾಣಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಸ್ಥಳೀಯ ಉದ್ಯಮಿ, ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರಕಟ್ಟ ಇದರ ಗೌರವಾಧ್ಯಕ್ಷರಾದ ಎ.ವಿಶ್ವನಾಥ್ ಹೆಗ್ಡೆಯವರು ಕೊಡುಗೆ ನೀಡಿದ ಸ್ಟೀಲ್ ಕವಾಟನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ವಾರ್ಡ್ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್, ಸೋಮನಾಥ್ ಬಿ.ಕೆ. & ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ, ಸ್ಥಳೀಯರಾದ ಗುರುರಾಜ್, ಶಶಿಕಲಾ ರಾಧಾಕೃಷ್ಣ, ಸುಮತಿ ಪೂಜಾರ್ತಿ, ಅಂಗನವಾಡಿ ಕಾರ್ಯಕರ್ತೆ ಇಂದಿರಾ, ಸಹಾಯಕಿ ಶ್ರೀಲತಾ, ಬಾಲವಿಕಾಸ ಸಮಿತಿ ಸದಸ್ಯರು, ಪುಟಾಣಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕಾರ್ಯಕ್ರಮ ನಿರೂಪಿಸಿದರು. ವಾರ್ಡ್ ಸದಸ್ಯರಾದ ರಾಜೇಶ್ ಸುವರ್ಣ ಧನ್ಯವಾದ ಸಲ್ಲಿಸಿದರು.