• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಉಡುಪಿ ಕಥಾ ಕಮ್ಮಟ ಕಾರ್ಯಕ್ರಮ

ByKiran Poojary

Nov 16, 2023

ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದು ನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ ಮುರಳೀಧರ ಉಪಾಧ್ಯ ಹೇಳಿದರು.

ಅವರು ಗುರುವಾರ ಎಂ.ಜಿ.ಎಂ ಕಾಲೇಜು ,ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಾಸ್ತಿ , ಶಿವರಾಮ ಕಾರಂತರು, ಲಂಕೇಶ್ , ಅನಂತಮೂರ್ತಿ, ವೈದೇಹಿ ಇಂಥವರ ಕಥೆಗಳನ್ನು ವಿದ್ಯಾರ್ಥಿಗಳು ಓದಬೇಕು. ಇಂತಹ ಕಮ್ಮಟಗಳ ಮೂಲಕ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕಥೆಗಾರರು ಆಗಲು ಸಾಧ್ಯ ಎಂದರು.

ವೇದಿಕೆಯಲ್ಲಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ
ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ , ಎಂ.ಜಿ.ಎಂ ಕಾಲೇಜು ಐಕ್ಯೂಎಸಿ ಮುಖ್ಯಸ್ಥೆ ಪ್ರೊ. ಶೈಲಜ, ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಉಪಸ್ಥಿತರಿದ್ದರು.

ಎಂ.ಜಿ.ಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪುತ್ತಿ ವಸಂತ್ ಕುಮಾರ್ ಸ್ವಾಗತಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು. ಕಸಾಪ ತಾಲೂಕು ಘಟಕಾಧ್ಯಕ್ಷ ರವಿರಾಜ್ ಎಚ್. ಪಿ. ಪ್ರಾಸ್ತಾವಿಕಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

Leave a Reply

Your email address will not be published. Required fields are marked *