ಕೋಟ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಚೈತನ್ಯ ತರಬೇತಿ ಸಂಸ್ಥೆ ಸಹಕಾರಿಯಾಗಲಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.
ಕೋಟ ಮಣೂರು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೈತನ್ಯ ತರಬೇತಿ ಕೇಂದ್ರ ಕೋಟ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ಬುದ್ಧಿ ಬೆಳವಣಿಗೆ ಹಾಗೂ ಸಾಹಿತಿಕ ವಿಚಾರಧಾರೆಯನ್ನು ವಿಕಸನಗಳ ಕಾರ್ಯಕ್ರಮಗಳು ಮಹತ್ತರವಾಗಿ ಕಾರ್ಯನಿರ್ವಹಿಸುತ್ತವೆ.ಅದರಂತೆ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಿದೆ ಎಂದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕ.ಸಾ.ಪ ಬ್ರಹ್ಮಾವರ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್ ಭಾಗವಹಿಸಿ ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಬಲ ತುಂಬಿದರು. ಮುಖ್ಯ ಅತಿಥಿಗಳಾಗಿ ಕೋಟದ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್ ಪಡುಕರೆ,ಶಾಲಾ ಮುಖ್ಯ ಶಿಕ್ಷಕಿ ಸೇಸು ಟೀಚರ್,ಸಹಶಿಕ್ಷಕಿ ನಾಗರತ್ನ ಇದ್ದರು.ಕಾರ್ಯಕ್ರಮ ಸಂಯೋಜಕ ಸಂತೋಷ್ ಕುಮಾರ್ ಕೋಟ ಸ್ವಾಗತಿಸಿ ,ನಿರೂಪಿಸಿ,ವಂದಿಸಿದರು.
ಕೋಟ ಮಣೂರು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೈತನ್ಯ ತರಬೇತಿ ಕೇಂದ್ರ ಕೋಟ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವ್ಯಕ್ತಿತ್ವ ವಿಕಸನ ಶಿಬಿರವನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕ.ಸಾ.ಪ ಬ್ರಹ್ಮಾವರ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್, ಕೋಟದ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್ ಪಡುಕರೆ ಇದ್ದರು.