
Lಕೋಟ: ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿಬೆಳೆಸಬೇಕಾದರೆ ಈಗಿದಿಂಗಲೇ ಕಾರ್ಯಪ್ರವೃತರಾಗಬೇಕಾದ ಅಗತ್ಯತೆ ಇದೆ ಎಂದು ತೆಕ್ಕಟ್ಟೆ ಗ್ರಾಮಪಂಚಾಯತ್ ಘನ ಹಾಗೂ ದ್ರವ ತ್ಯಾಜ್ಯ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಹೇಳಿದ್ದಾರೆ.
ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡದ ಸಹಯೋಗದೊಂದಿಗೆ ಬೊಬ್ಬರ್ಯ ಕಲಾ ವೇದಿಕೆ ಗೋಳಿಬೆಟ್ಟು ಐರೋಡಿ ಇವರ ಸಂಯೋಜನೆಯೊAದಿಗೆ ಐರೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋಳಿಬೆಟ್ಟು ಇಲ್ಲಿ ಹಮ್ಮಿಕೊಂಡ ಪರಿಸರ ಜಾಗೃತಿ ಮಾಲಿಕೆ 10 ಇದರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಪ್ರಸ್ತುತ ಅತಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಸುತ್ತಿದ್ದೇವೆ ಇದರ ಹಾನಿಯ ಬಗ್ಗೆ ಯಾರೂ ಕೂಡಾ ಅಂದಾಜಿಸುವುದಿಲ್ಲ ಇದರ ದುಷ್ಪರಿಣಾಮ ಮನುಕುಲದ ಅಂತ್ಯಕ್ಕೆ ಸಾಕ್ಷಿಯಾಗುತ್ತಿದೆ, ಒಂದೆಡೆ ಪ್ಲಾಸ್ಟಿಕ್‌ನಲ್ಲೆ ಆಹಾರ ಸೇವಿಸುತ್ತಿದ್ದೇವೆ, ಇನ್ನೊಂದೆಡೆ ಕಾಡು ಕಡಿದು ಕಾಂಕ್ರೀಟ್ ನಾಡನ್ನು ಸೃಷ್ಠಿಸುತ್ತಿದ್ದೇವೆ, ಈ ಎಲ್ಲಾ ಸಮಸ್ಯೆಗಳಿಂದ ಮುಂದಿನ ಜನಾಂಗಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿ ಅಂತ್ಯ ಯುಗದತ್ತ ಕಾಲಿರಿಸಿದ್ದೇವೆ, ಇದಾಗದಂತೆ ತಡೆಬೇಕಾದರೆ ಈಗಲೇ ನಾವುಗಳು ಪ್ಲಾಸ್ಟಿಕ್ ಮುಕ್ತ ಹಾಗೂ ಹಸಿರು ಕ್ರಾಂತಿಯತ್ತ ಹೆಜ್ಜೆ ಇರಿಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಪೋಷಕರಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮವನ್ನು ಪಾಂಡೇಶ್ವರ ರಕ್ತೇಶ್ಚರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಐರೋಡಿ ಗ್ರಾಮಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ,ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಪೂರ್ಣಿಮಾ,ಉಪಾಧ್ಯಕ್ಷ ವಿಜಯ್ ಪೂಜಾರಿ,ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ್ ಪೂಜಾರಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ,ಬೊಬ್ಬರ್ಯ ಕಲಾವೇದಿಕೆಯ ಅಧ್ಯಕ್ಷ ರಾಘವೇಂದ್ರ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮಹೇಶ್ ಮೂಡುಗಿಳಿಯಾರು ಸ್ವಾಗತಿಸಿದರು.
ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ನಿರೂಪಿಸಿ,ವಂದಿಸಿದರು.
ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡದ ಸಹಯೋಗದೊಂದಿಗೆ ಬೊಬ್ಬರ್ಯ ಕಲಾ ವೇದಿಕೆ ಗೋಳಿಬೆಟ್ಟು ಐರೋಡಿ ಇವರ ಸಂಯೋಜನೆಯೊAದಿಗೆ ಐರೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋಳಿಬೆಟ್ಟು ಇಲ್ಲಿ ಹಮ್ಮಿಕೊಂಡ ಪರಿಸರ ಜಾಗೃತಿ ಮಾಲಿಕೆ 10 ಕಾರ್ಯಕ್ರಮವನ್ನು ಪಾಂಡೇಶ್ವರ ರಕ್ತೇಶ್ಚರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಉದ್ಘಾಟಿಸಿದರು. ತೆಕ್ಕಟ್ಟೆ ಗ್ರಾಮಪಂಚಾಯತ್ ಘನ ಹಾಗೂ ದ್ರವ ತ್ಯಾಜ್ಯ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಸಂಪನ್ಮೂಲ ವ್ಯಕ್ತಿಯಾಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಐರೋಡಿ ಗ್ರಾಮಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಮತ್ತಿತರರು ಇದ್ದರು.
Leave a Reply