Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ಚರ್ಮರೋಗ ಮತ್ತು ಕಣ್ಣಿನ ಪೊರೆ ತಪಾಸಣೆ ಶಿಬಿರ

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ , ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಇವರುಗಳ ಸಹಭಾಗಿತ್ವದಲ್ಲಿ ಉಚಿತ ಚರ್ಮರೋಗ ಮತ್ತು ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನದಲ್ಲಿ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‌ನ ಅಧ್ಯಕ್ಷ ಅರವಿಂದ ಶರ್ಮ ವಹಿಸಿದ್ದರು. ಕಾರ್ಯಕ್ರಮವನ್ನು ರೋಟರಿ ಜಿಲ್ಲೆಯ ವಲಯ ೩ರ ಅಸಿಸ್ಟೆಂಟ್ ಗವರ್ನರ್ ಆಲ್ವಿನ್ ಕ್ವಾಡ್ರಸ್ ಉದ್ಘಾಟಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನದ ವೈದ್ಯಾಧಿಕಾರಿ ಡಾ. ರಾಘವೇಂದ್ರರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚರ್ಮರೋಗ ವೈದ್ಯರಾದ ಡಾ. ಉಮೇಶ್ ನಾಯಕ್ ಚರ್ಮರೋಗಗಳ ಬಗ್ಗೆ ಮಾಹಿತಿ ನೀಡಿದರು.
ನೇತ್ರ ತಜ್ಞರಾದ ಡಾ. ಅಭಿನಯ್, ಶಿರೂರು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ಯು.ಶಂಕರ್ ಶೆಟ್ಟಿ, ರೋಟರಿ ಕ್ಲಬ್ ಹಂಗಾರಕಟ್ಟೆ ಮಾಜಿ ಅಧ್ಯಕ್ಷೆರತ್ನ ಜೆ ರಾಜ್, ಸದಸ್ಯೆ ಜ್ಯೋತಿ ಉದಯ್ ಪೂಜಾರಿ, ಐರೋಡಿ ಗ್ರಾ.ಪಂ ಮಾಜಿ ಪಂಚಾಯತ್ ಅಧ್ಯಕ್ಷ ವಿಠ್ಠಲ ಪೂಜಾರಿ ಉಪಸ್ಥಿತರಿದ್ದರು. ಶಿಬಿರದಲ್ಲಿ ೧೧೦ ಜನ ಕಣ್ಣಿನ ತಪಾಸಣೆಯಲ್ಲಿ ಭಾಗಿಯಾದರೆ, ೭೮ ಜನ ಚರ್ಮದ ತಪಾಸಣೆ ನಡೆಸಿಕೊಂಡರು. ೧೮೮ ಸಾರ್ವಜನಿಕರು ಈ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದು ಕೊಂಡರು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕ ಗಣೇಶ್.ಜಿ ನಿರೂಪಿಸಿದರು. ರೋಟರಿ ಕ್ಲಬ್‌ನ ಬಾಲಕೃಷ್ಣ ಪೂಜಾರಿ ವಂದಿಸಿದರು.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ , ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಇವರುಗಳ ಸಹಭಾಗಿತ್ವದಲ್ಲಿ ಉಚಿತ ಚರ್ಮರೋಗ ಮತ್ತು ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ರೋಟರಿ ಜಿಲ್ಲೆಯ ವಲಯ ೩ರ ಅಸಿಸ್ಟೆಂಟ್ ಗವರ್ನರ್ ಆಲ್ವಿನ್ ಕ್ವಾಡ್ರಸ್ ಉದ್ಘಾಟಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ ಮಾಜಿ ಅಧ್ಯಕ್ಷೆರತ್ನ ಜೆ ರಾಜ್, ಸದಸ್ಯೆ ಜ್ಯೋತಿ ಉದಯ್ ಪೂಜಾರಿ, ಐರೋಡಿ ಗ್ರಾ.ಪಂ ಮಾಜಿ ಪಂಚಾಯತ್ ಅಧ್ಯಕ್ಷ ವಿಠ್ಠಲ ಪೂಜಾರಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *