ಕೋಟ: ಇಲ್ಲಿನ ಕೋಟ ಮಣೂರು ಪಡುಕರೆಯ ಇಂಡಿಕಾ ಕಲಾ ಬಳಗ ಪ್ರತಿ ವರ್ಷ ನೀಡಲ್ಪಡುವ ಮೊಳಹಳ್ಳಿ ಹೆರಿಯ ನಾಯ್ಕ ಸ್ಮಾರಕ ಇಂಡಿಕಾ ಪುರಸ್ಕಾರಕ್ಕೆ ಹಿರಿಯ ಪ್ರಸಿದ್ಧ ಯಕ್ಷ ಕಲಾವಿದ ಎಳ್ಳಂಪಳ್ಳಿ ಜಗನಾಥ್ ಆಚಾರ್ ಆಯ್ಕೆಯಾಗಿದ್ದಾರೆ. ಇದೇ ಬರುವ ಜನವರಿ 13ರಂದು ಮಣೂರು ಪಡುಕರೆ ಸರಕಾರಿ ಸಂಯುಕ್ತ ಫ್ರೌಢಶಾಲಾ ವಠಾರದಲ್ಲಿ ಇಂಡಿಕಾ14ನೇ ವರ್ಷದ ಸಂಭ್ರಮ ಕಾರ್ಯಕ್ರಮ ಜರಗಲಿಕ್ಕಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳ ನೃತ್ಯ ವೈವಿದ್ಯ,ಭಜನಾ ಕಾರ್ಯಕ್ರಮ,ಅಭಿನಯ ಕಲಾವಿದರು ಉಡುಪಿ ಇವರಿಂದ ಶಾಂಭವೀ ನಾಟಕ ಪ್ರದರ್ಶನಗೊಳ್ಳಲಿದೆ.ಎಂದು ಸಂಘಟಕ ಸಂತೋಷ್ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.