ಕೋಟ: ಭಾರತೀಯ ಅಂಚೆ ಇಲಾಖೆ ಹಾಗೂ ಪಂಚವರ್ಣ ಯುವಕಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಹಾಗೂ ಕೋಟ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ ಇದರ ಸಹಯೋಗದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಹಾಗೂ ತಿದ್ದುಪಡಿ,ಮತದಾರರ ಗುರುತಿನ ಚೀಟಿ ತಿದ್ದುಪಡಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸಂಬAಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಡಿ.6 ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಕೋಟ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ನೊಂದಾವಣೆ ಮಾಡಿಕೊಳ್ಳುವವರು ಕೋಟ ಹಾಗೂ ಸಾಲಿಗ್ರಾಮ ಅಂಚೆ ಕಛೇರಿಯಲ್ಲಿ ಡಿ.1ರಿಂದ ಟೋಕನ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ