
ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಮೂಡಗಿಳಿಯಾರು ಹೊನ್ನಾರಿ ಅಂಗನವಾಡಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರ ಡಿ.11ರಂದು ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ದೇವಪ್ಪ ಪಟಗಾರ ವಹಿಸಿದ್ದರು.
ಕೋಟ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಸಮುದಾಯ ಆರೋಗ್ಯ ಕೇಂದ್ರ ಕೋಟ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ವಿಶ್ವ ಏಡ್ಸ್ ದಿನಾಚರಣೆ ಮತ್ತು ಏಡ್ಸ್ ಖಾಯಿಲೆಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿ ವಾರಿಜ, ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರ ,ಪಿಎಚ್‌ಸಿಓ ಮಂದಾನಾಯಕ್, ಆಶಾ ಕಾರ್ಯಕರ್ತೆ ಭವಾನಿ ಮತ್ತು ಲಕ್ಷಿ÷್ಮ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಕೋಟ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮುದಾಯ ಆರೋಗ್ಯ ಕೇಂದ್ರ ಕೋಟ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ, ಸಮುದಾಯ ಆರೋಗ್ಯ ಅಧಿಕಾರಿ ವಾರಿಜ ಮತ್ತಿತರರು ಇದ್ದರು.
Leave a Reply