
ಕೋಟ : ಕೋಟತಟ್ಟು ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ ಡಿ.15ರಂದು ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನ ಅಪರಾಹ್ನ 3.00 ಗಂಟೆ ನಡೆಯಲಿದ್ದು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರು ತಮ್ಮ ಅಭಿವೃದ್ಧಿಗೆ ಸಂಬAಧ ಪಟ್ಟಂತೆ ಬೇಡಿಕೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸುವುದಲ್ಲದೆ, ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ಗ್ರಾಮ ಸಭೆಯಲ್ಲಿ ನೀಡಲು ಕೋಟತಟ್ಟು ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.