
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ ಶುಕ್ರವಾರದಂದು ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಅಧ್ಯಕ್ಷತೆಯಲ್ಲಿ ನಡೆಯಿತು.
ಕೋಟತಟ್ಟು ಪಂಚಾಯತ್ ಸದಸ್ಯ,ನ್ಯಾಯವಾದಿ ಹೆಚ್.ಪ್ರಮೋದ ಹಂದೆ ಅವರು ಕಾನೂನು ಮಾಹಿತಿ ನೀಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಂವಿಧಾನದ ಆಶಯದಂತೆ ಸಾಮಾಜಿಕ, ಆರ್ಥಿಕವಾಗಿ ಸಾಮರಸ್ಯ ಅಡಿಯಲ್ಲಿ ಜೀವನ ಸಾಗಿಸಬೇಕು, ಯಾವುದೇ ಕೀಳರಿಮೆ ಇಲ್ಲದೆ ಇತರ ಸಮುದಾಯದಂತೆ ಮುಂದೆ ಬರಬೇಕು ಎಂದು ಹೇಳಿದರು.
ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಬಗ್ಗೆ ತಿಳಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬುಟ್ಟಿ ನೇಯ್ಗೆ, ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಸಹಾಯದ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ ಪಿ, ಜ್ಯೋತಿ, ಅಶ್ವಿನಿ, ಸೀತಾ,ಸಮಾಜ ಕಲ್ಯಾಣ ಇಲಾಖೆಯ ಗುರು ರಾವ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸದಸ್ಯರಾದ ವಾಸು ಪೂಜಾರಿ ಸ್ವಾಗತಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ನಿರೂಪಿಸಿದರು. ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು.
ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ ಶುಕ್ರವಾರದಂದು ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಅಧ್ಯಕ್ಷತೆಯಲ್ಲಿ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ ಪಿ, ಜ್ಯೋತಿ ಮತ್ತಿತರರು ಇದ್ದರು.
Leave a Reply