Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಡುಕರೆ-ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಅನುದಾನ ನೀಡಬೇಕು- ಆನಂದ್ ಸಿ ಕುಂದರ್

ಕೋಟ: ಗ್ರಾಮೀಣ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಅನುದಾನ ಒದಗಿಸಬೇಕು ಈ ಮೂಲಕ ಕನ್ನಡ ಮಾಧ್ಯಮ ಶಾಲೆಗಳು ಉಳಿಯಲು ಸಾಧ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟಿದ್ದಾರೆ.

ಕೋಟದ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ಆಹ್ಲಾದ ಶಾಲಾ ಹಬ್ಬ 2023ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲೆಗಳ ಅಭಿವೃದ್ಧಿಗೆ ಆರ್ಥಿಕ ಕ್ರೂಡಿಕರಣ ಅತ್ಯಗತ್ಯ ಇದಕ್ಕಾಗಿ ಶಾಲಾ ಆಡಳಿತ ಮಂಡಳಿ ಸರಕಾರದ ಕದ ತಟ್ಟುವ ಸ್ಥಿತಿ ನಿರ್ಮಾಣಗೊಂಡಿದೆ. ಶಿಕ್ಷಣದ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಸ್ಥಿತಿ ಪ್ರಸ್ತುತ ದಿನಗಳಲ್ಲಿ ಇಲ್ಲ ಆದರೆ ಆಂಗ್ಲ ಶಿಕ್ಷಣ ಕಟ್ಟುಪಾಡುಗಳಿಂದ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳ ಸ್ಥಿತಿ ದಯನೀಯವಾಗಿದೆ.ಕೆ.ಸಿ ಕುಂದರ್ ಕನಸಿನ ಕೂಸಾದ ಈ ಮಣ್ಣಿನಲ್ಲಿ ಶೈಕ್ಷಣಿಕ ಕ್ರಾಂತಿ ಪಸರಿಸಿದ್ದೇವೆ ಇದಕ್ಕೆ ಹೆಮ್ಮೆ ಇದೆ ನಮ್ಮ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಬೇಕಾದ ಸವಲತ್ತುಗಳನ್ನು ನಮ್ಮ ಫೌಂಡೇಶನ್ ಸದಾ ಸಹಕಾರ ನೀಡಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ವಹಿಸಿದ್ದರು.
ಇದೇ ವೇಳೆ ವಿವಿಧ ವಿಭಾಗಗಳಲ್ಲಿ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಇಲಾಖೆಯ ಯೋಗಾನಂದ ನರಸಿಂಹ ಸ್ವಾಮಿ ,ಮಣೂರು ಗೀತಾನಂದ ಟ್ರಸ್ಟ್ನ ಟ್ರಸ್ಟಿ ವೈಷ್ಣವಿ ರಕ್ಷಿತ್ ಕುಂದರ್,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್,ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ,ಸAಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕ ನಿತ್ಯನಾಂದ ನಾಯಕ್,ಶಾಲಾ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್,ಪ್ರೌಢಶಾಲಾ ವಿಭಾಗದ ಅಧ್ಯಕ್ಷ ಎಂ ಜಯರಾಮ್ ಶೆಟ್ಟಿ, ಕೋಟ ಗ್ರಾಮಪಂಚಾಯತ್ ಸದಸ್ಯೆ ಶಾರದಾ ಆರ್ ಕಾಂಚನ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ನಾಗರತ್ನ ನಿರೂಪಿಸಿದರು. ಗೀತಾನಂದ ಫೌಂಡೇಶನ್ ರವಿಕಿರಣ್ ಹಾಗೂ ಮಮತಾ ಸಹಕರಿಸಿದರು.

ಕೋಟದ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ಆಹ್ಲಾದ ಶಾಲಾ ಹಬ್ಬ 2023ರ ಕಾರ್ಯಕ್ರಮವನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣ ಇಲಾಖೆಯ ಯೋಗಾನಂದ ನರಸಿಂಹ ಸ್ವಾಮಿ ,ಮಣೂರು ಗೀತಾನಂದ ಟ್ರಸ್ಟ್ನ ಟ್ರಸ್ಟಿ ವೈಷ್ಣವಿ ರಕ್ಷಿತ್ ಕುಂದರ್,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *