
ಕೋಟ: ಕೋಟದ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ಆಹ್ಲಾದ ಶಾಲಾ ಹಬ್ಬ 2023ರ ಎರಡನೆ ದಿನದ ಕಾರ್ಯಕ್ರಮ ಶನಿವಾರ ಜರಗಿತು.
ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿ ಗ್ರಾಮೀಣ ಭಾಗವಾದ ಕೋಟ ಮಣೂರು ಪಡುಕರೆ ಶಿಕ್ಷಣದ ಕಾಶಿಯಾಗಿ ಮಾರ್ಪಾಡುಗೊಂಡಿದೆ.ಇಲ್ಲಿನ ಶೈಕ್ಷಣಿಕ ಸಾಧನೆ ಅಗಾಧವಾಗಿದೆ, ಇಲ್ಲಿನ ಬೇಡಿಕೆಯಾದ ಪಬ್ಲಿಕ್ ಸ್ಕೂಲ್ ಬಗೆಗಿನ ಮನವಿಯನ್ನು ಸರಕಾರದ ಮಟ್ಟದಲ್ಲಿ ಕಾರ್ಯಗತಗೊಳಿಸಲು ಶ್ರಮಿಸುವುದಾಗಿ ಹೇಳಿದರು.
ಈ ವೇಳೆ ಇಲ್ಲಿನ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್ ವಹಿಸಿದ್ದರು.
ಇದೇ ವೇಳೆ ವಿವಿಧ ವಿಭಾಗಗಳಲ್ಲಿ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.ದಿಕ್ಸೂಚಿ ಭಾಷಣಕಾರರಾಗಿ ಕುಂದಗನ್ನಡದ ರಾಯಬಾರಿ ಮನು ಹಂದಾಡಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖಾಧಿಕಾರಿ ಮಾರುತಿ,ಕೋಟ ಪಡುಕರೆ ಲ.ಸೋ.ಬ.ಸ.ಪ್ರ. ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ,ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ , ಮಣೂರು ಗೀತಾನಂದ ಟ್ರಸ್ಟ್ನ ಟ್ರಸ್ಟಿ ವೈಷ್ಣವಿ ರಕ್ಷಿತ್ ಕುಂದರ್,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್,ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ,ಪ್ರಾಥಮಿಕ ಶಾಲಾಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ ,ಶಾಲಾ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್,ಪ್ರೌಢಶಾಲಾ ವಿಭಾಗದ ಅಧ್ಯಕ್ಷ ಎಂ ಜಯರಾಮ್ ಶೆಟ್ಟಿ, ಉಪಸ್ಥಿತರಿದ್ದರು. ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಪ್ರಾಸ್ತಾವನೆ ಸಲ್ಲಿಸಿದರು.ಪ್ರೌಢಶಾಲಾ ಸಹ ಶಿಕ್ಷಕ ಶ್ರೀಧರ ಶಾಸ್ತಿç ಸ್ವಾಗತಿಸಿದರು. ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕ ರಾಜೀವ ನಿರೂಪಿಸಿದರು.ಶಿಕ್ಷಕ ರಾಮದಾಸ್ ನಾಯಕ್ ವಂದಿಸಿದರು. ಗೀತಾನಂದ ಫೌಂಡೇಶನ್ ರವಿಕಿರಣ್ ಸಹಕರಿಸಿದರು.
ಕೋಟದ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ಆಹ್ಲಾದ ಶಾಲಾ ಹಬ್ಬ 2023ರ ಎರಡನೆ ದಿನದ ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಇವರನ್ನು ಸನ್ಮಾನಿಸಲಾಯಿತು. ಸಂಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಮಣೂರು ಗೀತಾನಂದ ಟ್ರಸ್ಟ್ನ ಟ್ರಸ್ಟಿ ವೈಷ್ಣವಿ ರಕ್ಷಿತ್ ಕುಂದರ್,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್,ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ ಮತ್ತಿತರರು ಇದ್ದರು.
Leave a Reply