
ಕೋಟ: ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಆಶ್ರಯದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಮೊಗವೀರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಾಲಿಗ್ರಾಮ ಘಟಕದ ಸಹಯೋಗದಲ್ಲಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಡಿ.24ರಂದು ಉಡುಪಿ ಜಿಲ್ಲಾ ಮಟ್ಟದ ಮೊಗವೀರ ಕ್ರೀಡಾಕೂಟ ಜರಗಿತು.
ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದಾಗ ಒಗ್ಗಟ್ಟು ಪ್ರದರ್ಶಿಸಲು ಸಾಧ್ಯವಾಗುತ್ತದೆ.ಒಗ್ಗಟ್ಟಿನ ಮೂಲಕ ನಾವು ಸಂಘಟನೆಗೊಳ್ಳಬೇಕು. ಈ ಕ್ರೀಡಾ ಸ್ಪರ್ಧೆಯಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಒಗ್ಗಟ್ಟು ಪ್ರದರ್ಶಿಸಿ ಎಂದರು.
ಕ್ರೀಡಾಪಟುಗಳ ವಂದನೆ ಸ್ವೀಕರಿಸಿದ ಕೋಟ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ.ಕುಂದರ್ ಮಾತನಾಡಿ, ಮೊಗವೀರ ಯುವ ಸಂಘಟನೆ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದಾಗ ಕಾರ್ಯಕ್ರಮ ಯಶಸ್ವಿಗೊಳ್ಳಲು ಸಾಧ್ಯ ಎಂದರು.
ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪಾಂಡುರAಗ ಬೈಂದೂರು ಪ್ರತಿಜ್ಞಾವಿಧಿ ಬೋಧಿಸಿದರು.
ವೇದಿಕೆಯಲ್ಲಿ ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷ ಕಿರಣ್ ಕುಂದರ್, ಬಾರ್ಕೂರು ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ಸತೀಶ್ ಅಮೀನ್, ಉದ್ಯಮಿಗಳಾದ ಗಣೇಶ್ ಪ್ರಸಾದ್ ಕಾಂಚನ್ ಶಿರಿಯಾರ, ಅರುಣ್ ಕುಂದರ್ ಚಿತ್ರಪಾಡಿ, ಕೋಟ ವಿದ್ಯಾಸಂಘದ ಆಡಳಿತ ಮಂಡಳಿಯ ಸದಸ್ಯ ವಸಂತ್ ಶೆಟ್ಟಿ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ನಾವಡ, ಬಗ್ವಾಡಿ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶಿವರಾಮ ಕೆ.ಎಂ, ಸತೀಶ್‌ಕುಮಾರ್ ಕೋಟೇಶ್ವರ, ಗಣೇಶ್ ಕಾಂಚನ್, ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಕ್ರೀಡಾ ಕಾರ್ಯದರ್ಶಿ ರಾಘವೇಂದ್ರ ಮೆಂಡನ್, ಸಾಲಿಗ್ರಾಮ ಮೊಗವೀರ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ವಿಜಯ ಕಾಂಚನ್, ಸಾಲಿಗ್ರಾಮ ಘಟಕದ ಉಸ್ತುವಾರಿ ಚಂದ್ರ ಮೊಗವೀರ,ಜಿಲ್ಲಾ ಕಾರ್ಯದರ್ಶಿ ರವೀಶ್ ಕೊರವಡಿ,ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಾಲಿಗ್ರಾಮ ಘಟಕದ ಪ್ರಮುಖರಾದ ಕೃಷ್ಣಮೂರ್ತಿ ಮರಕಾಲ ಸ್ವಾಗತಿಸಿದರು. ಸತೀಶ್ ಮರಕಾಲ ವಂದಿಸಿದರು. ಶಿಕ್ಷಕರಾದ ಅಶೋಕ ತೆಕ್ಕಟ್ಟೆ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಡಿ.24ರಂದು ಉಡುಪಿ ಜಿಲ್ಲಾ ಮಟ್ಟದ ಮೊಗವೀರ ಕ್ರೀಡಾಕೂಟವನ್ನು ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಕ್ರೀಡಾಕೂಟ ಉದ್ಘಾಟಿಸಿದರು. ಕೋಟ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ.ಕುಂದರ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಮತ್ತಿತರರು ಇದ್ದರು.
Leave a Reply