News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಾವಡಿ ಸ.ಹಿ.ಪ್ರಾ.ಶಾಲೆ ಶತಮಾನೋತ್ಸವ ಕಾರ್ಯಕ್ರಮ
ರಾಜ್ಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ – ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೋಟ: ರಾಜ್ಯ ಸರಕಾರ ರಾಷ್ಟೀಯ ಶಿಕ್ಷಣ ನೀತಿಯ ಬದಲಿಗೆ ರಾಜ್ಯ ಶಿಕ್ಷಣ ನೀತಿ ಎಸ್.ಇ.ಪಿ.ಯನ್ನು ಜಾರಿಗೊಳಿಸಿದೆ. ಆದರೆ ಸೆಂಟ್ರಲ್ ಸಿಲೆಬಸ್ ಶಾಲೆಗಳಲ್ಲಿ ರಾಷ್ಟಿçÃಯ ಶಿಕ್ಷಣ ನೀತಿ ಜಾರಿಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಉಂಟಾಗಲಿದ್ದು, ರಾಜ್ಯದ ವಿದ್ಯಾರ್ಥಿಗಳು ಕೆಲವೊಂದು ಸೌಲಭ್ಯದಿಂದ ವಂಚಿತರಾಗಲಿದ್ದಾರೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಕಾವಡಿ ಸ.ಹಿ.ಪ್ರಾ.ಶಾಲೆಯಲ್ಲಿ ಡಿ.23 ರಂದು ಜರಗಿದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಶಾಲೆಗಳು ಸಂಕಷ್ಟದಲ್ಲಿ:-
ರಾಜ್ಯದಲ್ಲಿ 48 ಸಾವಿರ ಸರಕಾರಿ ಶಾಲೆಗಳಿದ್ದು, 22 ಸಾವಿರ ಕೋಟಿ ರೂ ಅನುದಾನವನ್ನು ಸರಕಾರಿ ಶಾಲೆಗಳಿಗಾಗಿ ಸರಕಾರ ವರ್ಷಕ್ಕೆ ಖರ್ಚು ಮಾಡುತ್ತಿದೆ. ಆದರೂ ಮುಂದಿನ ಹತ್ತು ವರ್ಷದಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ 5 ಸಾವಿರಕ್ಕೂ ಹೆಚ್ಚು ಶಾಲೆಗಳು ಮುಚ್ಚಲಿದೆ. ಹೀಗಾಗಿ ಸರಕಾರಿ ಶಾಲೆಗಳ ಉಳಿವಿಗೆ ಎಲ್ಲ ಪಣತೊಡಬೇಕಿದೆ. ಶತಮಾನೋತ್ಸವ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂದಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.

ನಿವೃತ್ತ ಪ್ರಾಂಶುಪಾಲ ಬಿ. ಸೀತಾರಾಮ್ ಶೆಟ್ಟಿ ಶತಮಾನೋತ್ಸವ ಸ್ಮರಣ ಸಂಚಿಕೆಯ ಸ್ಮರಣ ಸಂಚಿಕೆಯ ಮುಖಪುಟದ ರಕ್ಷಾಕವಚ ಬಿಡುಗಡೆಗೊಳಿಸಿದರು. ಹವರಾಲು ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಉದಯಚಂದ್ರ ಶೆಟ್ಟಿ ಹಾಗೂ ದಾನಿಗಳಾದ ಪ್ರಪುö್ಪಲ್ಲ ಜೆ. ಶೆಟ್ಟಿ ಚಾಂಪಾಡಿ ಬಾಲವನ ಉದ್ಘಾಟಿಸಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಾಲೆ ಅಭಿವೃದ್ಧಿಗೆ ಶ್ರಮಿಸಿದವರು, ದಾನಿಗಳಿಗೆ ಗೌರವಾರ್ಪಣೆ ನಡೆಯಿತು.

ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷ ಲೋಕೇಶ್ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಗುರುರಾಜ್ ಕಾಂಚನ್,
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮನಾಭ ಕಾಂಚನ್, ಮಂದಾರ್ತಿ ವಲಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಉಚ್ಛ ನ್ಯಾಯಾಲಯದ ವಕೀಲ ಪ್ರಸಾದ್ ಹೆಗ್ಡೆ, ದಾನಿಗಳಾದ ಡಾ. ವಸಂತ್ ಶೆಟ್ಟಿ, ಬಾಬಣ್ಣ ಎಸ್. ಅಲ್ಸೆಬೆಟ್ಟು, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಶಿವರಾಮ ಶೆಟ್ಟಿ (ಭೂಮಿಕಾ), ಕಾವಡಿ, ಉಲ್ಲಾಸ್ ಕುಮಾರ್ ಶೆಟ್ಟಿ, ಕಾವಡಿ, ಉಪಾಧ್ಯಕ್ಷರಾದ ಮಂಜುನಾಥ ಹೆಬ್ಬಾರ್, ನೀಲಕಂಠ ರಾವ್, ಲೀಲಾವತಿ ಶೆಟ್ಟಿ, ಸುನೀಲ್ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ, ಸುಧಾಕರ್ ಜಿ. ಕಾಂಚನ್ , ನಾರಾಯಣ ಪೂಜಾರಿ, ಸುಕುಮಾರ್ ಶೆಟ್ಟಿ, ಜತೆ ಕಾರ್ಯದರ್ಶಿ ಯೋಗೀಶ್ ಎಂ. ಶೆಟ್ಟಿ, ಖಜಾಂಚಿ ಅಶೋಕ್ ಕುಮಾರ್ ಶೆಟ್ಟಿ ಹೆಗ್ಡೆ ಹೌಸ್, ಜತೆ ಖಜಾಂಚಿ ನಾಗರಾಜ ಇದ್ದರು.

ಶತಮಾನೋತ್ಸವ ಸಮಿತಿ ಅಧ್ಯಕ್ಷ ಕೆ.ಚಂದ್ರಶೇಖರ ಶೆಟ್ಟಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಉಷಾ ಶೆಟ್ಟಿ ವರದಿ ವಾಚಿಸಿದರು. ಶಿಕ್ಷಕ ಸುವೀರ್ ಹೊಳ್ಳ ಸ್ಮರಣ ಸಂಚಿಕೆ ಕುರಿತು ಮಾಹಿತಿ ನೀಡಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವರದರಾಜ್ ಶೆಟ್ಟಿ ಸ್ವಸ್ತಿವಾಚನಗೈದರು. ದೈ. ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಅನಂತರ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರಗಿತು.


ಕಾವಡಿ ಸ.ಹಿ.ಪ್ರಾ.ಶಾಲೆಯಲ್ಲಿ ಡಿ.23 ರಂದು ಜರಗಿದ ಶತಮಾನೋತ್ಸವ ಕಾರ್ಯಕ್ರಮವನ್ನು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮನಾಭ ಕಾಂಚನ್, ಮಂದಾರ್ತಿ ವಲಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಉಚ್ಛ ನ್ಯಾಯಾಲಯದ ವಕೀಲ ಪ್ರಸಾದ್ ಹೆಗ್ಡೆ, ದಾನಿಗಳಾದ ಡಾ. ವಸಂತ್ ಶೆಟ್ಟಿ ಮತ್ತಿತರರು ಇದ್ದರು.
ಕೋಟ.ಡಿ.24 ಕಾವಡಿ ಶಾಲೆ

Leave a Reply

Your email address will not be published. Required fields are marked *