News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ- ವಿಪಕ್ಷ ನಾಯಕ ಕೋಟ

ಕೋಟ: ಜೀವನದಲ್ಲಿ ಸೋಲು ಗೆಲುವು ಇದ್ದಂತೆ ಕ್ರೀಡೆಯಲ್ಲೂ ಸೋಲು ಗೆಲುವು ಸಹಜ ಆದರೆ ಅದನ್ನು ಸಮಾನವಾಗಿ ಸ್ವೀಕರಿಸಿ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಕೋಟದ ಬಾರಿಕೆರೆಯಲ್ಲಿ ಬಾರಿಕೆರೆ ಯುವಕ ಮಂಡಲದ ಆಶ್ರಯದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಬಿಪಿಎಲ್ ಅನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯ ಮೂಲಕ ಸಾಮರಸ್ಯ ಕಾಪಾಸುವುದ ಜತೆಗೆ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸಿ ಗೆಲುವು ಕಂಡವರು ಸಂಭ್ರಮಿಸುವ ಹೊತ್ತಿನಲ್ಲಿ ಸೋತವರನ್ನು ಸಂತೈಸುವ ಗುಣ ನಮ್ಮಲ್ಲಿಸೃಷ್ಠಿಯಾಗಬೇಕು ಜತೆಗೆ ಗ್ರಾಮೀಣ ಭಾಗದಲ್ಲಿ ಕ್ರೀಡಾ ಹಬ್ಬ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೃಷಿಕ ರವೀಂದ್ರ ಐತಾಳ್,ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಬಾರಿಕೆರೆ,ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್,ಜಯಕರ್ನಾಟಕ ರಾಜ್ಯ ಮುಖಂಡ ಪ್ರವೀಣ್ ಶೆಟ್ಟಿ,ಬಾರಿಕೆರೆ ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಕಾಂಚನ್ ಉಪಸ್ಥಿತರಿದ್ದರು. ಬಾರಿಕೆರೆ ಯುವಕ ಮಂಡಲದ ರಂಜೀತ್ ಕುಮಾರ್ ಸ್ವಾಗತಿಸಿದರು. ಪ್ರದೀಪ್ ಪುತ್ರನ್ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗದಲ್ಲಿ ಪದ್ಯಶ್ರೇಷ್ಠ ಪ್ರಶಸ್ತಿಯನ್ನು ವಿತರಿಸಲಾಯಿತು.

ಕೋಟದ ಬಾರಿಕೆರೆಯಲ್ಲಿ ಬಾರಿಕೆರೆ ಯುವಕ ಮಂಡಲದ ಆಶ್ರಯದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಕೃಷಿಕ ರವೀಂದ್ರ ಐತಾಳ್,ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಬಾರಿಕೆರೆ,ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *