• Sun. May 19th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟದ ಗಿಳಿಯಾರು ಶಾಂಭವೀ ಶಾಲಾ ವಾರ್ಷಿಕೋತ್ಸವ ಸಂಭ್ರಮ
ಅನುದಾನಿತ ಶಿಕ್ಷಣ ಸಂಸ್ಥೆಗಳ ಉಳಿವಿಗೆ ಸರಕಾರ ಕಾಯ್ದೆ ರೂಪಿಸಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ

ByKiran Poojary

Dec 31, 2023

ಕೋಟ: ಪ್ರಸ್ತುವ ಕಾಲಘಟ್ಟದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸ್ಥಿತಿ ಗತಿ ಶೋಚನೀಯವಾಗಿದೆ ಆದರೆ ಆ ಸಂಸ್ಥೆಗಳ ಉಳಿವಿಗೆ ಸರಕಾರ ಕಾಯ್ದೆ ರೂಪಿಸಲಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಭಾನುವಾರ ಕೋಟದ ಗಿಳಿಯಾರು ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿ ಆ ಸಂಸ್ಥೆಗಳಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಸರಕಾರದ ಪ್ರಸ್ತುತ ಕಾಯ್ದೆ ಅಡಿಯಾಗಿದೆ ಈ ದಿಸೆಯಲ್ಲಿ ಸಾಕಷ್ಟು ಅನುದಾನಿತ ಕನ್ನಡ ಮಾಧ್ಯಮಗಳು ಮುಚ್ಚಲ್ಪಟ್ಟಿವೆ.ಈ ಬಗ್ಗೆ ನಾವೆಲ್ಲ ವಿಧಾನಸಭೆಯಲ್ಲಿ ಗಟ್ಟಿಧ್ವನಿಯಲ್ಲಿ ಧ್ವನಿಯಾಗಿದ್ದೇವೆ ಪರಿಹಾರ ಕಂಡುಕೊಳ್ಳಬೇಕು ಇಲ್ಲವಾದ್ದಲ್ಲಿ ಇನ್ನಷ್ಟು ಶಾಲೆಗಳು ಅಳಿವಿನಂಚಿಗೆ ತಳ್ಳಲ್ಪಡುವುದರಲ್ಲಿ ಅನುಮಾನವೇ ಇಲ್ಲ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ದಾನಿಗಳು ಶ್ರಮಿಸಬೇಕು ಈ ದಿಸೆಯಲ್ಲಿ ಈ ಭಾಗದಲ್ಲಿ ಗೀತಾನಂದ ಫೌಂಡೇಶನ್ ಸರಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ಸಹಾಯಹಸ್ತ ಚಾಚುತ್ತಿವೆ ಎಂದು ಪೋಷಕರು ಮಕ್ಕಳ ಬಗ್ಗೆ ನಿರ್ಲಕ್ಷೀಯ ದೋರಣೆ ಬಿಟ್ಟು ಸಂಸ್ಕಾರವAತ ಮಕ್ಕಳನ್ನಾಗಿಸಲು ಕರೆ ಇತ್ತರು.
ಕಾರ್ಯಕ್ರಮದಲ್ಲಿ ಇತ್ತೀಚಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೃಷ್ಣಮೂರ್ತಿ ಉರಾಳ ಚಿತ್ರಪಾಡಿ ಇವರನ್ನು ಸನ್ಮಾನಿಸಲಾಯಿತು.

ಇದೇ ವೇದಿಕೆಯಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ಮಾಜಿ ಜಿಲ್ಲಾ ಪರಿಷತ್ ಅಧ್ಯಕ್ಷ ಕೆ.ಸಿ ಕುಂದರ್ ಸ್ಮರಣಾರ್ಥ ಬಹುಮಾನವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ವಿದ್ಯಾರ್ಥಿಗಳಿಗೆ ವಿತರಿಸಿದರು. ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ಧ್ವಜಾರೋಹಣ ನೆರವೆರಿಸಿದರು.
ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ , ಶಾಲಾ ಆಡಳಿತ ಮಂಡಳಿ ಸಂಚಾಲಕ ಸಚಿನ್ ಕಾರಂತ್ ,ಆಡಳಿತ ಮಂಡಳಿಯ ಅಧ್ಯಕ್ಷ ಕೆ.ರಾಜಾರಾಮ್ ಐತಾಳ್,ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಜೋಗಿ,ಶಾಲಾ ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾನಂದ.ಜಿ,ಶಾಲಾ ನಿವೃತ್ತ ಮುಖ್ಯಶಿಕ್ಷಕ ಎಂ.ಎನ್ ಮಧ್ಯಸ್ಥ,ಶಿಕ್ಷಣ ಇಲಾಖೆಯ ಸಂಯೋಜಕಿ ಸವಿತ ಆಚಾರ್ಯ,ಶಾಲಾ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ್ ಪ್ರಭು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ದಿವಾಕರ್ ರಾವ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ವಿನೋದ ವಿಜಯ್ ನಿರೂಪಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ಜರಗಿದವು.

ಕೋಟದ ಗಿಳಿಯಾರು ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೃಷ್ಣಮೂರ್ತಿ ಉರಾಳ ಚಿತ್ರಪಾಡಿ ಇರನ್ನು ಸನ್ಮಾನಿಸಲಾಯಿತು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ , ಶಾಲಾ ಆಡಳಿತ ಮಂಡಳಿ ಸಂಚಾಲಕ ಸಚಿನ್ ಕಾರಂತ್ ,ಆಡಳಿತ ಮಂಡಳಿಯ ಅಧ್ಯಕ್ಷ ಕೆ.ರಾಜಾರಾಮ್ ಐತಾಳ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *