
ಅಂಬಲಪಾಡಿ ಗ್ರಾಮ ಪಂಚಾಯತ್ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉಧ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ & ಯೋಜನೆಗಳ ಸಾಮಾಜಿಕ ಪರಿಶೋಧನೆಯ ಪೂರ್ವಭಾವಿ ಸಭೆ.
34ನೇ ಅಂಬಲಪಾಡಿ ಗ್ರಾಮ ಪಂಚಾಯತ್ ಕಿದಿಯೂರು, 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉಧ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ & ಯೋಜನೆಯ ಸಾಮಾಜಿಕ ಪರಿಶೋಧನೆಯ ಪೂರ್ವ ಭಾವಿ ಸಭೆಯು ದಿನಾಂಕ 04/01/2024 ಗುರುವಾರದಂದು ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಯೋಗೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಇಂದಿನ ಈ ಸಭೆಯಲ್ಲಿ ಅಕ್ಷಯ ಕೃಷ್ಣ ತಾಲೂಕು I.E.C. ಸಂಯೋಜಕರು, ಪ್ರವೀಣ್ ಆಚಾರ್ಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧನೆ ಉಪಸ್ಥಿತರಿದ್ದು ನರೇಗಾ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಜಾತ ಸುಧಾಕರ್, ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಹರೀಶ್ ಪಾಲನ್, ಪ್ರಮೋದ್ ಸಾಲಿಯಾನ್, ಉಷಾ ಶೆಟ್ಟಿ ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಟೀಚರ್ & ಯೋಜನಾ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
Leave a Reply