Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಫೆ.20ಕ್ಕೆ ಕೋಟದಲ್ಲಿ ಗೋ ಕರುಗಳ ಪ್ರದರ್ಶನ
ಆನಂದ್ ಸಿ ಕುಂದರ್ ರವರ ಅಮೃತಮಹೋತ್ಸವ ಹಿನ್ನಲೆಯಲ್ಲಿ ಆಯೋಜನೆ ಪೂರ್ವಭಾವಿ ಸಭೆ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ,ಕೋಟ ಸಹಕಾರಿ ವ್ಯವಸಾಯಕ ಸಂಘ,ಉಡುಪಿ ಜಿಲ್ಲಾ ಪಂಶು ಸಂಗೋಪನಾ ಇಲಾಖೆ,ಕೆ.ಎಂ ಎಫ್ ಇವರುಗಳ ಜಂಟಿ ಆಶ್ರಯದಲ್ಲಿ ಇದೇ ಬರುವ ಫೆ.20ರಂದು ಕೋಟದಲ್ಲಿ ಸಮಾಜಸೇವಕ ಆನಂದ್ ಸಿ ಕುಂದರ್ ಹುಟ್ಟುಹಬ್ಬದ ಅಮೃತಮಹೋತ್ಸವ ಹಿನ್ನಲೆಯಲ್ಲಿ ಬೃಹತ್ ಗೋ ಕರುಗಳ ಸ್ಪರ್ಧೆ, ಪ್ರದರ್ಶನ,ಹಾಗೂ ರಾಸುಗಳ ಹಾಲು ಕರೆಯುವ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಶುಕ್ರವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಕಛೇರಿಯಲ್ಲಿ ಜರಗಿತು.

ಕೋಟ ಸಹಕಾರಿ ವ್ಯವಸಾಯಕ ಸಂಘದ ಅದ್ಯಕ್ಷ ಜಿ ತಿಮ್ಮ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಬ್ರಹ್ಮಾವರ ತಾಲೂಕು ಪಶುಪಾಲನಾ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರದೀಪ್ ಕುಮಾರ್ , ಕೋಟ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್,ಕೋಟ ಸಿ ಎ ಬ್ಯಾಂಕ್ ಸಿ ಇ ಒ ಶರತ್ ಕುಮಾರ್ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕೆ.ಎಂ.ಎಫ್ ಇದರ ವೈದ್ಯಾಧಿಕಾರಿ ಡಾ. ನಿಜಾಮ್ ಪಾಟೀಲ್,ಮಾಜಿ ನಿರ್ದೇಶಕಿ ಜಾನಕಿ ಹಂದೆ,ಜನತಾ ಸಂಸ್ಥೆಯ ಮ್ಯಾನೇಜರ್ ಶ್ರೀನಿವಾಸ್ ಕುಂದರ್,ಕೋಟ ಗ್ರಾ.ಪಂ ಸದಸ್ಯ ಅಜಿತ್ ದೇವಾಡಿಗ,ವಿವಿಧ ಭಾಗಗಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

ಆನಂದ್ ಸಿ ಕುಂದರ್ ರವರ ಅಮೃತಮಹೋತ್ಸವ ಹಿನ್ನಲೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅದ್ಯಕ್ಷ ಜಿ ತಿಮ್ಮ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಬ್ರಹ್ಮಾವರ ತಾಲೂಕು ಪಶುಪಾಲನಾ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರದೀಪ್ ಕುಮಾರ್ , ಕೋಟ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *