Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಅಮೃತೇಶ್ವರಿ ಜಾತ್ರಾ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ

ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಮಂಗಳವಾರ ವಿದ್ಯುಕ್ತವಾಗಿ ಚಾಲನೆಗೊಂಡಿತು.
ಪೂರ್ವಾಹ್ನ ಪ್ರಾರ್ಥನಾ,ಫಲನ್ಯಾಸಪೂರ್ವಕ ಸಾಮೂಹಿಕ ಪ್ರಾರ್ಥನೆ, ಶ್ರೀ ದೇವಿಗೆ ಪಂಚವಿAಶತಿ,ದ್ರವ್ಯ ಕಲಶಪೂರ್ವಕ ಕಲಾತತ್ವ ಹೋಮ,ಹಾಗೂ ಪರಿವಾರ ದೇವರುಗಳಿಗೆ ನವಕ ಪ್ರದಾನ ಕಲಾಧಿವಾಸ ಹೋಮ ಕಾರ್ಯಕ್ರಮಗಳು ವೇ.ಮೂ ಮಧುಸೂಧನ ಬಾಯರಿ ನೇತೃತ್ವದಲ್ಲಿ ನೆರವೆರಿತು.

ಶ್ರೀ ದೇಗುಲದ ಆಡಳಿತ ಮಂಡಳಿದ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ದಂಪತಿಗಳು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.ಅಪರಾಹ್ನ ಮಹಾಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಿತು.
ದೇಗುಲದ ಆಡಳಿತಾಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ದೇಗುಲದ ಅರ್ಚಕ ಪ್ರತಿನಿಧಿ ಕೃಷ್ಣ ಜೋಗಿ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರುಗಳು ,ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇಂದು ಗೆಂಡೋತ್ಸವ,ಗುರುವಾರ ಢಕ್ಕೆ ಬಲಿ,ತುಲಾಭಾರ ಸೇವೆ ಕಾರ್ಯಕ್ರಮ,ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಲಿದೆ.

ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ಜಾತ್ರೋತ್ಸವದ ಹಿನ್ನಲ್ಲೆಯಲ್ಲಿ ಶ್ರೀ ದೇಗುಲದ ಆಡಳಿತ ಮಂಡಳಿದ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ದಂಪತಿಗಳು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ದೇಗುಲದ ಆಡಳಿತಾಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ,ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ,ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರುಗಳು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *