Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೋಟ ವಲಯದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್  ಬ್ರಹ್ಮಾವರ ತಾಲೂಕು. ಕೋಟ ವಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಜ.28ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು  ಬ್ರಹ್ಮಾವರ ತಾಲೂಕು ಯೋಜನಾಧಿಕಾರಿಗಳಾದ ರಮೇಶ್ ಪಿ.ಕೆ ಉದ್ಘಾಟಿಸಿ  ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಧಾರ್ಮಿಕ ಸಂಪ್ರದಾಯಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವಂಥದ್ದು ಅವಶ್ಯವಾಗಿರುವುದೆಂದು ತಿಳಿಸಿದರು.

ಸಾಮೂಹಿಕ ಸತ್ಯನಾರಾಯಣ ಪೂಜೆಯ ಯಶಸ್ಸು ಜನರ ಒಗ್ಗಟ್ಟನ್ನು ತಿಳಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ  ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ್ ಸಿ ಕುಂದರ್ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಅರ್ಥಪೂರ್ಣ ಕಾರ್ಯಕ್ರಮದಿಂದ ಸಮಾಜದಲ್ಲಿ ಸ್ವಾಸ್ಥ ಮೂಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ನರೇಂದ್ರಕುಮಾರ್ ಕೋಟ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಪ್ರಗತಿಪರ ಕೃಷಿಕ ಜಯರಾಮ್ ಶೆಟ್ಟಿಯನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ , ಸರ್ಕಾರಿ ಪದವಿಪೂರ್ವ ಕಾಲೇಜು ಬ್ರಹ್ಮಾವರದ ಉಪನ್ಯಾಸಕಿ ಸವಿತಾ ಎರ್ಮಾಳ್, ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಪ್ರಗತಿಪರ ಕೃಷಿಕರಾದ ರವೀಂದ್ರ ಐತಾಳ್, ಪ್ರತಿಭಾ ಸತೀಶ್ ಕುಂದರ್, ವಲಯದ ಮೇಲ್ವಿಚಾರಕರಾದ  ನೇತ್ರಾವತಿ, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣೂರು ಒಕ್ಕೂಟದ ಅಧ್ಯಕ್ಷೆ ಗೀತಾ ವಹಿಸಿದ್ದರು. ಕಾರ್ಯಕ್ರಮವನ್ನು ಸೇವಾ ಪ್ರತಿನಿಧಿಯಾದ ಗುಲಾಬಿ ದೇವದಾಸ್ ಸ್ವಾಗತಿಸಿ,   ಲಕ್ಷಿ÷್ಮ ಪ್ರಭು ವಂದಿಸಿ, ಕೃಷಿ ಮೇಲ್ವಿಚಾರಕರಾದ ರಾಘವೇಂದ್ರ ನಿರೂಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್  ಬ್ರಹ್ಮಾವರ ತಾಲೂಕು. ಕೋಟ ವಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ನರೇಂದ್ರಕುಮಾರ್ ಕೋಟ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಪ್ರಗತಿಪರ ಕೃಷಿಕ ಜಯರಾಮ್ ಶೆಟ್ಟಿಯನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ , ಸರ್ಕಾರಿ ಪದವಿಪೂರ್ವ ಕಾಲೇಜು ಬ್ರಹ್ಮಾವರದ ಉಪನ್ಯಾಸಕಿ ಸವಿತಾ ಎರ್ಮಾಳ್, ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *