
ಕೋಟ: ಕೋಟ ಮೂರುಕೈಯ ಉಪ್ಲಾಡಿ ಬಳಿ ಆಲ್ಟೊ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಅಪಘಾತದಲ್ಲಿ ಗಂಭೀರ ಗೊಂಡ ವ್ಯಕ್ತಿ ವಿವೇಕ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ (40) ಎಂದು ತಿಳಿದು ಬಂದಿದೆ.
ಕೋಟ ಮೂರುಕೈಯಿಂದ ಅಚ್ಲಾಡಿ ಹೋಗುತ್ತಿದ್ದ ಕಾರಿಗೆ ಕೋಟದ ಕಡೆಗೆ ಬರುತ್ತಿದ್ದ ಟಿಪ್ಪರ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕನ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿದ್ದು ತಕ್ಷಣ ಸ್ಥಳಕ್ಕಾಗಮಿಸಿದ ಕೋಟದ ಜೀವನ್ ಮಿತ್ರ ಆಂಬ್ಯುಲೇನ್ಸ್ ನಾಗರಾಜ್ ಪುತ್ರನ್ ಆಸ್ಪತ್ರೆಗೆ ಸಾಗಿಸಿದರು. ಅಪಘಾತ ಸ್ಥಳಕ್ಕೆ ತಕ್ಷಣ ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ಭೇಟಿ ನೀಡಿ ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.














Leave a Reply