ಕೋಟ : ಹೊಳಪು ಕಾರ್ಯಕ್ರಮವು ಎಲ್ಲ ಜನಪ್ರತಿನಿಧಿಗಳನ್ನು ಒಂದೇ ಸೂರಿನಡಿಯಲ್ಲಿ ಒಟ್ಟುಗೂಡಿಸಿ ನಾವೆಲ್ಲರೂ ಒಂದೇ ಎಂದು ಸಾರುವ ಕಾರ್ಯಕ್ರಮ. ಇಂತಹ ವಿಶಿಷ್ಠವಾದ ಕಾರ್ಯಕ್ರಮದ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಇನ್ನಷ್ಟು ಸಬಲೀಕರಣದತ್ತ ಹೆಜ್ಜೆಯನ್ನಿಡಲು ಸಾಧ್ಯ ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ಎ ಕಿರಣ್ ಕೊಡ್ಗಿಅವರು ಹೇಳಿದರು.
ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಅವರ ಆಶ್ರಯದಲ್ಲಿ ನಡೆಯುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ ಹೊಳಪು-೨೦೨೪( ಗ್ರಾಮ ಸರಕಾರದ ದಿಬ್ಬಣ) ಕಾರ್ಯಕ್ರಮದ ಟ್ರೋಫಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಸಂಚಾಲಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಹೊಳಪು ಕಾರ್ಯಕ್ರಮವನ್ನು ಪಂಚಾಯತ್ ಹಬ್ಬ ಎನ್ನುವ ರೀತಿಯಲ್ಲಿ ಸಂಭ್ರಮಿಸುವ, ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕೋರಿದರು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಸತೀಶ್ ಕುಂದರ್, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್ ,ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್ ನಾವಡ, ಸ್ಥಳೀಯ ಪಂಚಾಯತ್ ಜನ ಪ್ರತಿನಿಧಿಗಳು, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ನಿರೂಪಿಸಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಪ್ತ ಸಹಾಯಕ ಶ್ರೀ ಹರೀಶ್ ಕುಮಾರ್ ಶೆಟ್ಟಿ ಪ್ರಸ್ತಾಪಿಸಿ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಶ್ರೀ ರವೀಂದ್ರ ರಾವ್ ವಂದಿಸಿದರು.
Notice: Undefined variable: post in /home/hosakira/public_html/wp-content/themes/newses/inc/ansar/hooks/hook-single-page.php on line 180