
ಕೋಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಬ್ರಹ್ಮಾವರ ಹಾಗೂ ಗ್ರಾಮ ಪಂಚಾಯತ್ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಪಡವೋ ಬೇಟಿ ಬಚಾವೋ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟ ಇಲ್ಲಿ ಜರಗಿತು.
ಕಾರ್ಯಕ್ರಮದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣೆ, ಹಾಗೂ ಮಾಹಿತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕೋಟದ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಇವರು ಹೆಣ್ಣು ಸಮಾಜದಲ್ಲಿ ಎಷ್ಟು ಮುಖ್ಯ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಣೆಯ ಕುರಿತು ಸಮಗ್ರ ಮಾಹಿತಿ ತಿಳಿಸಿದರು.
ಪಂಚಾಯತ್ ಅಭಿವ್ರದ್ದಿ ಅಧಿಕಾರಿ ರವೀಂದ್ರ ರಾವ್ ಮಾತನಾಡಿ ಹೆಣ್ಣು ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡಿದಲ್ಲಿ ಎತ್ತರಕ್ಕೆ ಬೆಳೆಯ ಬಲ್ಲಳು ಎಂಬುದನ್ನು ಮನಗಾಣಿಸಿದರು.
ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಇವರು ಹೆಣ್ಣು ಸಮಾಜದ ಮತ್ತು ದೇಶದ ಅಭಿವೃದ್ಧಿಗೆ ಹೇಗೆ ಕೊಡುಗೆ ನೀಡಬಲ್ಲಳು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸುಮಂಗಲ ಮಕ್ಕಳಿಗೆ ಮತ್ತು ಪೋಷಕರಿಗೆ ಸರ್ಕಾರದ ಯೋಜನೆಯ ಉದ್ದೇಶ ಅದರ ಕಾರ್ಯ ವ್ಯಾಪ್ತಿ ಹಾಗೂ ಉದ್ದೇಶ ಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಹೆಣ್ಣು ಮಕ್ಕಳನ್ನು ಹೆತ್ತವರು ನಾನು ನನ್ನ ಕನಸು ಸೆಲ್ಫಿ ಸ್ಟಾಂಡ್ ಜೊತೆ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು. ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಜ್ಯೋತಿ, ಅಶ್ವಿನಿ ದಿನೇಶ್, ಶಾಲಾ ಮುಖ್ಯ ಶಿಕ್ಷಕಿ ಪುಷ್ಪವತಿ ಹೊಳ್ಳ, ಕೋಟತಟ್ಟು ಅಂಗನವಾಡಿ ಕಾರ್ಯಕರ್ತರು, ಶಾಲಾ ಸಿಬ್ಬಂದಿ ವರ್ಗ, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಲಯ ಮೇಲ್ವಿಚಾರಕಿ ಮೀನಾಕ್ಷಿ ಪ್ರಸ್ತಾವನೆ ಸಲ್ಲಿಸಿ ಸ್ವಾಗತಿಸಿದರು. ಕೋಟ ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಕಾಕಾರ್ಯಕ್ರಮ ನಿರೂಪಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಬ್ರಹ್ಮಾವರ ಹಾಗೂ ಗ್ರಾಮ ಪಂಚಾಯತ್ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಪಡವೋ ಬೇಟಿ ಬಚಾವೋ ಕಾರ್ಯಕ್ರಮವನ್ನು ಕೋಟದ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಉದ್ಘಾಟಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಸುಮಂಗಲ,,ಶಾಲಾ ಮುಖ್ಯ ಶಿಕ್ಷಕಿ ಪುಷ್ಪವತಿ ಹೊಳ್ಳ ಮತ್ತಿತರರು ಇದ್ದರು.














Leave a Reply