
ಕುಂದಾಪುರ : ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗರ್ಭ ಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮವು ಫೆ.18 ರಂದು ಸಂಜೆ ಕುಂದಾಪುರ ಹಳೆ ಬಸ್ ನಿಲ್ದಾಣದ ಮಾಸ್ತಿಕಟ್ಟೆ ಸರ್ಕಲ್ ನಿಂದ ಮೆರವಣಿಗೆ ಮೂಲಕ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಳಕ್ಕೆ ತರಲಾಯಿತು.

ವಿಶೇಷ ಚೆಂಡೆ ವಾದನ, ಭಜನಾ ಮಂಡಳಿ ಅವರಿಂದ ಕುಣಿತ ಭಜನೆ, ಮಹಿಳೆಯರಿಂದ ಪೂರ್ಣ ಕುಂಭ ಸ್ವಾಗತವು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು.
ಈ ಸಂದರ್ಭದಲ್ಲಿ ದೇವಳದ ಧರ್ಮದರ್ಶಿಗಳಾದ ಗಣಪತಿ ಸುವರ್ಣ, ಜಲಜ ಸುವರ್ಣ ಮತ್ತು ಮಕ್ಕಳು, ಗೌರವ ಸಮಿತಿಯ ಅಧ್ಯಕ್ಷರು, ಉತ್ಸವ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.
Leave a Reply