ಉಡುಪಿ: ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವುದನ್ನು ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಯತ್ನಿಸಿದ ಘಟನೆ ನಡೆದಿದೆ.

ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸದ್ದಾರೆ.
ಈ ವೇಳೆಯಲ್ಲಿ ಉಡುಪಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಎಲ್ಲರನ್ನು ವಶಪಡಿಸಿಕೊಂಡಿದ್ದಾರೆ.
















Leave a Reply