Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೆ ಆಗ್ರಹ

ಉಡುಪಿ: ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿರುವಾಗ ಆಡಳಿತ ಪಕ್ಷದ ಅಬ್ಯರ್ಥಿಗೆ ಮತ ನೀಡುವಂತೆ ಒತ್ತಾಯಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಬೆಳಗಾವಿಯ ಸ್ವಗೃಹದಲ್ಲಿ ನಡೆಸಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಭೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಭೆಯ ಮೂಲಕ, ಸಚಿವೆ ನೀತಿ ಸಂಹಿತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೇ ಸ್ಪಷ್ಟವಾಗಿರುವ ಕಾರಣ, ಕೂಡಲೇ ಸಚಿವೆಯಿಂದ ರಾಜೀನಾಮೆ ಪಡೆದುಕೊಳ್ಳುವಂತೆ ಉಡುಪಿಯ ಸಾಮಾಜಿಕ ಕಾರ್ಯಕರ್ತ ಶ್ರೀರಾಮ ದಿವಾಣ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರದಿಂದ ಮತದಾರರಿಗೆ ಯಾವುದೇ ಒತ್ತಡವಾಗಲೀ, ಬಲವಂತವಾಗಲಿ ಇಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದು ರಾಜ್ಯ ಸರಕಾರದ ಮುಖ್ಯಸ್ಥರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಜವಾಬ್ದಾರಿ ಮತ್ತು ಕರ್ತವ್ಯವವಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿರುವುದರಿಂದ ಮತ್ತು ನ್ಯಾಯಯುತ ಚುನಾವಣೆಗಾಗಿ ಮುಖ್ಯಮಂತ್ರಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ರಾಜೀನಾಮೆ ಪಡೆದುಕೊಳ್ಳುವುದು ಅತೀ ಅಗತ್ಯ ಮತ್ತು ಅನಿವಾರ್ಯ ಎಂದು ಶ್ರೀರಾಮ ದಿವಾಣ ತಿಳಿಸಿದ್ದಾರೆ.

ಈ ಸಂಬಂಧವಾಗಿ ಶ್ರೀರಾಮ ದಿವಾಣ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಶ್ರೀರಾಮ ದಿವಾಣ ಉಡುಪಿ ಮೊಬೈಲ್: 8105749711.

Leave a Reply

Your email address will not be published. Required fields are marked *