• Thu. May 2nd, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ- ಉದ್ಯಮಿ ಬಿಜು ನಾಯರ್

ByKiran Poojary

Apr 19, 2024

ಕೋಟ:  ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ ಎಂದು ಉದ್ಯಮಿ ಬಿಜು ನಾಯರ್ ಹೇಳಿದರು.
ಕೋಟದ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ, ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ , ಕೋಟ ಗ್ರಾಮಪಂಚಾಯತ್ ನೇತೃತ್ವದಲ್ಲಿ ಎರಡನೆ ದಿನದ ಬೇಸಿಗೆ ಶಿಬಿರದ ಚಿತ್ತಾರ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮುಗ್ಧ ಮನಸ್ಸಿನ ಮಕ್ಕಳಿಗೆ ಆರಂಭದಲ್ಲೆ ಹೆಚ್ಚಿನ ಮಾಹಿತಿ ನೀಡಬೇಕಾದ ಅವಶ್ಯಕತೆ ಇದೆ,ಮೊಬೈಲ್ ಗೀಳು ಇರುವ ಈ ಕಾಲಘಟ್ಟದಲ್ಲಿ ಬೇಸಿಗೆ ಶಿಬಿರಗಳು ಮಕ್ಕಳ ಮನಸ್ಥಿತಿಯನ್ನು ಬದಲಾವಣೆಗೆ ಯೋಗ್ಯವಾಗಿದೆ ಈ ನಿಟ್ಟಿನಲ್ಲಿ ಇಂಥಹ ಸಂಘಸAಸ್ಥೆಗಳು ಬೇಸಿಗೆ ಶಿಬಿರ ಆಯೋಜಿಸಿ ಸಮಾಜಕ್ಕೆ ಪೂರಕವಾದ ಮೌಲ್ಯಗಳನ್ನು ನೀಡುತ್ತಿದೆ ಎಂದು ಪ್ರಶಂಸಿದರು.

ಇದೇ ವೇಳೆ ಸಂಪನ್ಮೂಲ ವ್ಯಕ್ತಿ ರೋಹಿತ್ ಬೈಕಾಡಿ ಇವರನ್ನು ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ರಾಷ್ಟಿçಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರದಾನಕಾರ್ಯದರ್ಶಿ ದಿನೇಶ್ ಗಾಣಿಗ, ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಪನ್ಮೂಲ ವ್ಯಕ್ತಿ ಜಯಲಕ್ಷ್ಮೀ ಟೀಚರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಇಂಡಿಕಾ ಕಲಾ ಬಳಗದ ಸಂತೋಷ್ ಕುಮಾರ್ ಕೋಟ ನಿರೂಪಿಸಿದರೆ, .ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಶಕೀಲ ಎನ್ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪಂಚವರ್ಣದ ಸಂಚಾಲಕಿ ಸುಜಾತ ಬಾಯರಿ  ವಂದಿಸಿದರು.

ಇಂಡಿಕಾ ಕಲಾ ಬಳಗ ಮಣೂರು ಪಡುಕರೆ,ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ  ,ಕೋಟ ಗ್ರಾಮಪಂಚಾಯತ್ ನೇತೃತ್ವದಲ್ಲಿ ಎರಡನೆ ದಿನದ ಬೇಸಿಗೆ ಶಿಬಿರದ ಚಿತ್ತಾರ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮವನ್ನು ಉದ್ಯಮಿ ಬಿಜು ನಾಯರ್ ಉದ್ಘಾಟಿಸಿದರು. ಕೋಟ ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ರಾಷ್ಟಿಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರದಾನಕಾರ್ಯದರ್ಶಿ ದಿನೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *