• Sun. Jun 16th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಸಾಲಿಗ್ರಾಮ- ಕಾರ್ಯಕರ್ತರು, ಮತದಾರರೆ ಪಕ್ಷದ ಆಸ್ತಿ -ಕೆ.ಜಯಪ್ರಕಾಶ್ ಹೆಗ್ಡೆ

ByKiran Poojary

May 22, 2024

ಕೋಟ: ಕಾರ್ಯಕರ್ತರು ಹಾಗೂ ಮತದಾರರೇ ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು.

ಕೋಟ ಬ್ಲಾಕ್ ಕಾಂಗ್ರೆಸ್ ಕಛೇರಿ ಇಂದಿರಾದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭಿನಂದನಾ ಸಭೆ ಹಾಗೂ ಪದವೀಧರ,ಶಿಕ್ಷಕರ ಕ್ಷೇತ್ರ ಚುನಾವಣೆಯ ಮಾಹಿತಿ ಸಭೆಯಲ್ಲಿ ಮಾತನಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯದ ವಿಶ್ವಾಸ ವ್ಯಕ್ತಪಡಿಸಿದ ಅವರು ಕಾರ್ಯಕರ್ತರ ,ಸ್ಥಳೀಯ ಮುಖಂಡರ ಪರಿಶ್ರಮ ಪಕ್ಷದ ಗೆಲುವಿಗೆ ಪೂರಕ ವಾತಾವರಣ ಕಲ್ಪಿಸಲಿದೆ.

ಈ ದಿಸೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಬೇಕಾದದ್ದು ಆದ್ಯಕರ್ತವ್ಯವಾಗಿದೆ.ಚುನಾವಣೆ ಮುಂಚೆ ಹಾಗೂ ನಂತರ ಪಕ್ಷದ ಕಾರ್ಯಕರ್ತರ ಪ್ರತಿ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅಗತ್ಯತೆಯನ್ನು ಒತ್ತಿ ಹೇಳಿದ ಅವರು ನಿರಂತರ ಸಂಪರ್ಕದಿAದ ಸದೃಢ ಪಕ್ಷಸಂಘನೆ ಸಾಧ್ಯ ಅಲ್ಲದೆ ವಿಧಾನಪರಿಷತ್‌ನಲ್ಲಿ ನಮ್ಮ ಪಕ್ಷದ ಸಂಖ್ಯಾಬಲವನ್ನು ವೃದ್ಧಿಸಿಕೊಳ್ಳಬೇಕು ಆ ಮೂಲಕ ಅನೇಕ ಅಭಿವೃದ್ಧಿ ಕಾಮಗಾರಿ ಬಿಲ್ ಪಾಸ್‌ಗೆ ಅನುಕೂಲಕರ ವಾತಾವರಣಸೃಷ್ಠಿಯಾಗುತ್ತದೆ ಎಂದು ಕಾರ್ಯಕರ್ತರಿಗೆ ಹಾಗೂ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ,ಹಿಂದುಳಿದ ವರ್ಗ ಜಿಲ್ಲಾಧ್ಯಕ್ಷ ತಿಮ್ಮ ಪೂಜಾರಿ, ಮಾಜಿ ಬ್ರಹ್ಮವಾರ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷ ಉದಯ್ ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ, ಉಡುಪಿ ಜಿಲ್ಲಾ ಆರ್.ಜಿ.ಪಿ ಅಧ್ಯಕ್ಷೆ ರೋಷನಿ ಒಲಿವೆರಾ , ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಪಿ ಸುವರ್ಣ, ಮಾಜಿ ಅಧ್ಯಕ್ಷೆ ಮಮತಾ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಾಜಿಕಾ ಜಾಲತಾಣ ಜಿಲ್ಲಾಧ್ಯಕ್ಷ ರೋಷನ್ ಶೆಟ್ಟಿ ಮತ್ತಿತರರು ಇದ್ದರು.

ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಸ್ವಾಗತಿಸಿದರು.ಕಾರ್ಯಕ್ರಮವನ್ಮು ಕೋಟ ಬ್ಲಾಕ್ ಕಾಂಗ್ರೆಸ್ ಮುಖಂಡ ಗಣೇಶ್ ನೆಲ್ಲಿಬೆಟ್ಟು ನಿರೂಪಿಸಿದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯ ರವೀಂದ್ರ ಕಾಮತ್ ವಂದಿಸಿದರು.

ಕೋಟ ಬ್ಲಾಕ್ ಕಾಂಗ್ರೆಸ್ ಕಛೇರಿ ಇಂದಿರಾದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭಿನಂದನಾ ಸಭೆ ಹಾಗೂ ಪದವೀಧರ,ಶಿಕ್ಷಕರ ಕ್ಷೇತ್ರ ಚುನಾವಣೆಯ ಮಾಹಿತಿ ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ,ಹಿಂದುಳಿದ ವರ್ಗ ಜಿಲ್ಲಾಧ್ಯಕ್ಷ ತಿಮ್ಮ ಪೂಜಾರಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *