ಕುಂದಾಪುರ : ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವುಗೊಳಿಸಲು ಪರವಾನಿಗೆಗೆ ಲಂಚದ ಬೇಡಿಕೆಯಿಟ್ಟ ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಬ್ಬಂಧಿ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಯನ್ನು ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಎಂದು ಗುರುತಿಸಲಾಗಿದೆ. ಪರಾರಿಯಾದ ಅರಣ್ಯ ವೀಕ್ಷಕನನ್ನು ವಿನಾಯಕ ಎಂದು ಗುರುತಿಸಲಾಗಿದೆ.
ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವುಗೊಳಿಸಲು ಅರಣ್ಯಇಲಾಖೆಗೆ ಅನುಮತಿಗಾಗಿ ಅರ್ಜಿ ನೀಡಿದ್ದರು. ಪರವಾನಿಗೆ ನೀಡಲು ಆರೋಪಿಗಳು ನಾಲ್ಕು ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಮಹಮ್ಮದ್ ಅನ್ವರ್ ಹಸನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಸಮೇತ ಆರೋಪಿ ಬಂಗಾರಪ್ಪನನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ನಟರಾಜ್ ಎಂ. ಎ ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ. ಸಿ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಂಜುನಾಥ್ ಇವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಮಲ್ಲಿಕಾ, ಪುಷ್ಪಾವತಿ, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಹಾಗೂ ಸುಧೀರ್ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಲೋಕಾಯುಕ್ತ ದಾಳಿ : ಹಲಸಿನ ಮರ ಕಡಿಯಲು ಪರವಾನಿಗೆಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪವಲಯ ಅರಣ್ಯಾಧಿಕಾರಿ ವಶಕ್ಕೆ…!!















Leave a Reply