• Tue. Jul 2nd, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಜು.1ಕ್ಕೆ ಜಿಲ್ಲಾಧಿಕಾರಿ ಕಛೇರಿ  ಎದುರು ಕರವೇ ಧರಣಿ ಸತ್ಯಗ್ರಹ : ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಚಳವಳಿ

ByKiran Poojary

Jun 29, 2024

ಜು.1ಕ್ಕೆ ಜಿಲ್ಲಾಧಿಕಾರಿ ಕಛೇರಿ  ಎದುರು ಕರವೇ ಧರಣಿ ಸತ್ಯಗ್ರಹ : ಮಣಿಪಾಲ್ ಉಡುಪಿ ಜಿಲ್ಲೆ
ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಚಳವಳಿ

ಉಡುಪಿ ಜಿಲ್ಲೆ : ‘ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ’ ಚಳವಳಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಜುಲೈ 1 ರಂದು ನಗರದ ಜಿಲ್ಲಾಧಿಕಾರಿ ಕಚೇರಿ  ಎದುರು ಧರಣಿ ಸತ್ಯಾಗ್ರಹ ನಡೆಸಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 2:00 ರವರೆಗೆ ಧರಣಿ ನಡೆಸಿ ಸಿಎಂಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ  ತಿಳಿಸಿದ್ದಾರೆ. ಕರ್ನಾಟಕದ ಎಲ್ಲ ಬಗೆಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಸಿಂಹ ಪಾಲು ಇರಬೇಕು ಎನ್ನುವುದು ಕನ್ನಡಿಗರ ಬೇಡಿಕೆಯಾಗಿದೆ. ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಿಲ್ಲ. ಹೊರ ರಾಜ್ಯ ದವರು ಕನ್ನಡಿಗರ ಉದ್ಯೋಗ ಕಿತ್ತುಕೊಳ್ಳುತ್ತಿದ್ದು, ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗು ತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡಿಗರ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿಗಾಗಿ ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ 2 ದಶಕದಿಂದ ಹೋರಾಟ ನಡೆಸುತ್ತ ಬರಲಾಗುತ್ತಿದೆ. ಇದೀಗ ಚಳವಳಿ ನಡೆಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಲ್ಲ ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆಯ ಶೇ.100ರಷ್ಟು ಹುದ್ದೆ, ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಬೇಕು ಎಂಬಿತ್ಯಾದಿಗಳು ವೇದಿಕೆಯ ಬೇಡಿಕೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯ  ಎಲ್ಲಾ ಸಂಘಟನೆಯ  ವೇದಿಕೆಯ ಅಧ್ಯಕ್ಷರು ಕಾರ್ಯಕರ್ತರು, ನಿರುದ್ಯೋಗಿಗಳು ಹಾಗೂ ಕನ್ನಡಿಗರು ಧರಣಿ ಸತ್ಯಾಗ್ರಹ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *