*”ಉಜ್ವಲ ಸಂಜೀವಿನಿ ಒಕ್ಕೂಟ” ಅಂಬಲಪಾಡಿ ಗ್ರಾಮ ಪಂಚಾಯತ್, ನ ವಾರ್ಷಿಕ ಮಹಾಸಭೆಯು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ದಿನಾಂಕ 30/07/2024 ಮಂಗಳವಾರ ನಡೆಯಿತು.*
ಮುಖ್ಯ ಅತಿಥಿಗಳಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತಾ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಮೇಡಂ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೃಷಿ ಇಲಾಖೆಯ ಸಂಪನ್ಮೂಲ ವ್ಯಕ್ತಿ ವೆಂಕಟೇಶ್ ಸರ್ ಸ್ವ-ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು… ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕರು ಹೇಮಂತ್ ಸರ್ ತೋಟಗಾರಿಕೆಯ ಬಗ್ಗೆ ವಿವರಣೆ ನೀಡಿದರು. ತಾಲೂಕು ಕ್ಲಸ್ಟರ್ ಆಫೀಸರ್ ಸುಜಾತಾ ಮೇಡಂ ಸಂಘಗಳ ನಿರ್ವಹಣೆ ಬಗ್ಗೆ ಹಾಗೂ ರೈತ ಉತ್ಪಾದಕ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸೆಲ್ಕೋ ಸೋಲಾರ್ ನ ಮ್ಯಾನೇಜರ್ ಅಂಜಲಿ ಭಟ್ ಸೋಲಾರ್ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರಾದ ಸವಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಕಾರ್ಯದರ್ಶಿ ಗೀತಾಪಾಲನ್ ಕಾರ್ಯಕ್ರಮ ನಿರೂಪಿಸಿದರು. ಪುಷ್ಪಾ ಹಾಗೂ ಇಂದಿರಾ ಅವರಿಂದ ಪ್ರಾರ್ಥನೆ ನಡೆಯಿತು. ಶಮಿತಾ ಅತಿಥಿ ಅಭ್ಯಾಗತರಿಗೆ ಸ್ವಾಗತಿಸಿದರು. ಸಂಜೀವಿನಿ ಒಕ್ಕೂಟದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು..
“ಉಜ್ವಲ ಸಂಜೀವಿನಿ ಒಕ್ಕೂಟ” ಅಂಬಲಪಾಡಿ ಗ್ರಾಮ ಪಂಚಾಯತ್ ನ ವಾರ್ಷಿಕ ಮಹಾಸಭೆ
