• Fri. May 9th, 2025

News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ.....

ಗಂಗೊಳ್ಳಿ: ಅಕ್ರಮ ಅಕ್ಕಿ ಸಾಗಾಟ : 1,390 ಕೆ.ಜಿ. ಅನ್ನಭಾಗ್ಯ ಯೋಜನೆಯ ಅಕ್ಕಿ ವಶಕ್ಕೆ…!!

ByKiran Poojary

Aug 2, 2024

ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪದ ನಾಯಕವಾಡಿ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗೂಡ್ಸ್‌ ವಾಹನದಲ್ಲಿ ಕಾನೂನು ಬಾಹಿರವಾಗಿ ಅಕ್ಕಿ ಸಾಗಿಸುತ್ತಿದ್ದುದನ್ನು ಆಹಾರ ನಿರೀಕ್ಷಕ ಸುರೇಶ ಎಚ್‌.ಎಸ್‌. ಹಾಗೂ ಪೊಲೀಸರು ಪತ್ತೆ ಹಚ್ಚಿದ ಘಟನೆ ಸಂಭವಿಸಿದೆ ‌

ಗುಜ್ಜಾಡಿ ಗ್ರಾಮದ ಮಂಕಿ ಕ್ರಾಸ್‌ ಬಳಿ ವಾಹನ ನಿಲ್ಲಿಸಿದಾಗ 24 ಪಾಲಿಥಿನ್‌ ಚೀಲಗಳಲ್ಲಿ ಕುಚ್ಚಲಕ್ಕಿ ಹಾಗೂ 4 ಪಾಲಿಥಿನ್‌ ಚೀಲಗಳಲ್ಲಿ ಬೆಳ್ತಿಗೆ ಅಕ್ಕಿ ಕಂಡುಬಂತು. ಒಟ್ಟು 1,390 ಕೆ.ಜಿ. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಅಂಗಡಿಗಳಿಗೆ ಮಾರಾಟ ಮಾಡಲು ತರಲಾಗುತ್ತಿತ್ತು ಎನ್ನಲಾಗಿದೆ ‌. ಅಕ್ಕಿ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *