Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಮೊಗದೊಮ್ಮೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯ ಗರಿ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2022-23ನೇ ಸಾಲಿನಲ್ಲಿ “ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ”ವೆಂದು, ಪ್ರಶಸ್ತಿಗೆ ಆಯ್ಕೆ ಮಾಡಿದ್ದು. ಈ ಹಿನ್ನಲೆಯಲ್ಲಿ  ಆ.14ರಂದು ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ರವರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ಮತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರಿಗೆ ಬ್ಯಾಂಕಿನ ಪರವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ನಿರ್ದೇಶಕ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *