
ಕೋಟ: ಸಾಲಿಗ್ರಾಮದ ಇಲ್ಲಿನ ಚಿತ್ರಪಾಡಿಯ ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಅಂಗವಾಗಿ ಇದರ ಮನವಿ ಪೋಸ್ಟರ್ ಶುಕ್ರವಾರ ಸಾಲಿಗ್ರಾಮ ದೇಗುಲದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರಂತರು ಶೈಕ್ಷಣಿಕ ಕ್ಷೇತ್ರದಲ್ಲಿ ಚಿತ್ರಪಾಡಿ ಶಾಲೆ ಬಹಳಷ್ಟು ಮುಂಚೂಣಿಯಲ್ಲಿವೆ ಇದರ ಶತ ಸಂವತ್ಸರ ಕಳೆದಿರುವುದು ಪ್ರಗತಿಪಥದತ್ತ ಮುನ್ನುಗ್ಗುತ್ತಿರುವುದು ಆಶಾದಾಯಕ ಬೆಳವಣಿಯಾಗಿದೆ,ಈ ದಿಸೆಯಲ್ಲಿ ಶತಮಾನೋತ್ಸ ಸಂಭ್ರಮ ಯಶಸ್ಸಿನ ತೇರಾಗಲಿ ಎಂದು ಶುಭಹಾರೈಸಿದರು. ಲೋಗೋವನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ್ ದೇವಾಡಿಗ,ಅಕ್ಷರರಥ ಸಮಿತಿಯ ಅಧ್ಯಕ್ಷ ನಾಗರಾಜ್ ಗಾಣಿಗ, ಶಾಲಾ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ , ಶತಮಾನೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ, ಸಮಿತಿಯ ಕೋಶಾಧಿಕಾರಿ ಕೃಷ್ಣಮೂರ್ತಿ ಮರಕಾಲ ,ಶಾಲಾಭಿವೃದ್ಧಿ ಸದಸ್ಯರಾದ ಹರೀಷ್, ಕೃಷ್ಣ ಆಚಾರ್ ,ಗಿರೀಶ್ ಕುಂದರ್, ಶಾಲಾ ಶಿಕ್ಷಕರಾದ ಪಾರ್ವತಿ ಶೆಟ್ಟಿ, ಸಮತಿ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ರಾಘವೇಂದ್ರ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರಪಾಡಿಯ ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಅಂಗವಾಗಿ ಇದರ ಮನವಿ ಪೋಸ್ಟರ್ ಹಾಗೂ ಲೋಗೋವನ್ನುಸಾಲಿಗ್ರಾಮ ದೇಗುಲದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಬಿಡುಗಡೆಗೊಳಿಸಿದರು. ದೇಗುಲದ ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ್ ದೇವಾಡಿಗ, ಅಕ್ಷರರಥ ಸಮಿತಿಯ ಅಧ್ಯಕ್ಷ ನಾಗರಾಜ್ ಗಾಣಿಗ ಮತ್ತಿತರರು ಇದ್ದರು.













Leave a Reply