ಕೋಟ: ಒರ್ವ ವಿದ್ಯಾರ್ಥಿ ಸಾಧನೆ ಅಥವಾ ಅವನ ಜೀವನದ ತಳಹದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಅಭಿಪ್ರಾಯಪಟ್ಟರು.
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಕ ಎಂದರೆ ಅವರು ದೇವರಿಗೆ ಸಮಾನವಾಗಿ ಕಾಣುವ ಕಾಲಘಟ್ಟದಲ್ಲಿ ನಾವಿದ್ದ ದಿನಗಳಲ್ಲಿ ರಾಜಾರಾಮ್ ಐತಾಳ್ ಸಾಕಷ್ಟು ವಿದ್ಯಾರ್ಥಿಗಳನ್ನು ತಮ್ಮ ಶಿಕ್ಷಣದ ಕ್ರಾಂತಿಯ ಮೂಲಕ ರೂಪಿಸಿದ್ದಾರೆ.
ವಿದ್ಯಾರ್ಥಿಗಳನ್ನು ತಿದ್ದಿತಿಡಿದ ಗುರುಪರಂಪರೆಯನ್ನು ಗೌರವಿಸುತ್ತಾ ಸಂಸ್ಕಾರ ಭರಿತ ಜೀವನವನ್ನು ಸಾಗಿಸೋಣ ಆ ಮೂಲಕ ಪಂಚವರ್ಣ ಸಂಸ್ಥೆಯ ಸಾಮಾಜಿಕ ಬದ್ಧತೆ ಅವರ ನಿತ್ಯ ನಿರಂತರೆತೆಯ ಕಾರ್ಯಕ್ರಮಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುವಂತ್ತಾಗಿದೆ ಎಂದು ತಮ್ಮ ಅಭಿಮತವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.
ಇದೇ ವೇಳೆ ಗಿಡ ನಡುವ ಮೂಲಕ ಹಸಿರು ಗುರುತು ಪರಿಸರ ಜಾಗೃತಿ ಮೆರೆಯಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಮಾಜಿ ಅಧ್ಯಕ್ಷ ಚಂದ್ರ ನಾಯರಿ,ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ,ವಿಪ್ರ ಮಹಿಳಾ ಸಾಲಿಗ್ರಾಮ ವಲಯ ಸಂಚಾಲಕಿ ವನೀತಾ ಉಪಾಧ್ಯಾ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸನ್ಮಾನಪತ್ರವನ್ನು ಸದಸ್ಯ ಸಂತೋಷ್ ಕುಮಾರ್ ಕೋಟ ವಾಚಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.