
ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ 2023-24ನೇ ಸಾಲಿನ ವಾರ್ಷಿಕ ಲೆಕ್ಕಪರಿಶೋಧನಾ ಜಮಾಬಂದಿ ಕಾರ್ಯಕ್ರಮ ಮಂಗಳಾರ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವಾರಂಬಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಶೇಖರ್ ಜಮಾಬಂದಿ ವರದಿ ಮಂಡಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಜಮಾಬಂದಿ ಮಹತ್ವದ ಕುರಿತು ಮಾಹಿತಿ ನೀಡಿದರು
ಉಡುಪಿ ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗ ಅಭಿಯಂತರ ಶ್ರೀನಾಥ್ ನಾಯಕ್ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಿದ್ದರು.
ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ ಉಪಸ್ಥಿತರಿದ್ದರು. ಜಮಾಬಂದಿ ಕಾರ್ಯಕ್ರಮವನ್ನು ಪಂಚಾಯತ್ ಕಾರ್ಯದರ್ಶಿ ಶೇಖರ್ ಮರವಂತೆ ನಿರ್ವಹಿಸಿದರು.
ಕೋಟ ಗ್ರಾಮಪಂಚಾಯತ್ 2023-24ನೇ ಸಾಲಿನ ವಾರ್ಷಿಕ ಲೆಕ್ಕಪರಿಶೋಧನಾ ಜಮಾಬಂದಿ ಕಾರ್ಯಕ್ರಮದಲ್ಲಿ ಉಡುಪಿ ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗ ಅಭಿಯಂತರ ಶ್ರೀನಾಥ್ ನಾಯಕ್ ಭಾಗಿಯಾದರು. ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ ಉಪಸ್ಥಿತರಿದ್ದರು.
Leave a Reply