ಕೋಟ: ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ, ರಜತಾದ್ರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ, ಮೂಡುಗಿಳಿಯಾರು-ಕೋಟ ಇವರ ನೇತೃತ್ವದಲ್ಲಿ
ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಮಂಗಳವಾರ ಮೂಡುಗಿಳಿಯಾರು ಶಾಲಾ ಕ್ರೀಡಾಂಗಣ ಜರಗಿತು. ಕಾರ್ಯಕ್ರಮವನ್ನು ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು
ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಮಾತನಾಡಿ ಕ್ರೀಡಾ ಕ್ಷೇತ್ರದಲ್ಲಿ ಪ್ರತಿಯೊರ್ವ ವಿದ್ಯಾರ್ಥಿ ಕೂಡಾ ಭಾಗಿಯಾಗಬೇಕು ಆ ಮೂಲಕ ರಾಜ್ಯ ರಾಷ್ಟç ಅಂತಾರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಜಲುಗಳನ್ನು ದಾಟಬೇಕು,ಸರಕಾರ ಕ್ರೀಡೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದು ಇದರ ಸದ್ಭಳಕೆ ಮಾಡಿಕೊಳ್ಳಲು ಕರೆನೀಡಿದರು.
ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಹಾಗೂ ಬಿ ಆರ್ ಸಿ ಕೋ ಆರ್ಡಿನೇಟರ್ ಅರ್ಚನಾ ಹೆಗ್ಡೆ,ಉದ್ಯಮಿಗಳಾದ ಬಡಾಮನೆ ರತ್ನಾಕರ ಶೆಟ್ಟಿ, ಗುತ್ತಿಗೆದಾರ ಕೆ.ಆರ್ ರತ್ನಾಕರ್ ನಾಯಕ್,ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ್ ಭಟ್,ಕೋಟ ಗ್ರಾ.ಪಂ ಸದಸ್ಯ ಶೇಖರ್ ಜಿ.ಶಾಲಾ ಎರಡು ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಯೋಗೇಂದ್ರ ಪೂಜಾರಿ, ವೆಂಕಟೇಶ ಅಡಿಗ,ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ವಸಂತಿ ಮತ್ತಿತರರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರೆ,ದೈಹಿಕ ಶಿಕ್ಷಕ ಶೇಖರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ, ರಜತಾದ್ರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ , ಸರಕಾರಿ ಸಂಯುಕ್ತ ಪ್ರೌಢಶಾಲೆ, ಮೂಡುಗಿಳಿಯಾರು- ಕೋಟ ಇವರ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಕಾರ್ಯಕ್ರಮವನ್ನು ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಬ್ರಹ್ಮಾವರ ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಹಾಗೂ ಬಿ ಆರ್ ಸಿ ಕೋ ಆರ್ಡಿನೇಟರ್ ಅರ್ಚನಾ ಹೆಗ್ಡೆ,ಉದ್ಯಮಿಗಳಾದ ಬಡಾಮನೆ ರತ್ನಾಕರ ಶೆಟ್ಟಿ, ಗುತ್ತಿಗೆದಾರ ಕೆ.ಆರ್ ರತ್ನಾಕರ್ ನಾಯಕ್ ಮತ್ತಿತರರು ಇದ್ದರು.
Notice: Undefined variable: post in /home/hosakira/public_html/wp-content/themes/newses/inc/ansar/hooks/hook-single-page.php on line 180