ಜಮಖಂಡಿ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ ಬೆಂಗಳೂರು ಇದರ 2022 23ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಲೆಕ್ಕಪರಿಶೋಧನಾ ವರ್ಗೀಕರಣ ‘ಎ’ ವರ್ಗದಲ್ಲಿ ಆಗಿದ್ದಕ್ಕೆ ಕರ್ನಾಟಕ ರಾಜ್ಯಕ್ಕೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಸಾವಳಗಿ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಸಂಘದ ಅಧ್ಯಕ್ಷರು ಬಸವರಾಜ್ ಪರಮಗೌಡ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀ ಎಂ. ಎಸ್. ಜಾಧವ್ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಕರ್ನಾಟಕ ರಾಜ್ಯ ಸಹಕಾರ ಅಪೇಕ್ಸ ಬ್ಯಾಂಕ್ ಕೊಡುವ ಪ್ರಶಸ್ತಿಗೆ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, 2022-23 ನೇ ಸಾಲಿನ ಅತ್ಯುತ್ತಮ ಕಾರ್ಯನಿರ್ವಹಣಾ PACS ಪ್ರಶಸ್ತಿಗೆ 1 ನೇ ಬಹುಮಾನವನ್ನು ಪಡೆದುಕೊಂಡಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ್ ಪರಮಗೌಡ ಮಾತನಾಡಿ ಸರಿಯಾದ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದ ರೈತರು.ಗ್ರಾಹಕರು, ಶ್ರಮವಹಿಸಿ ಕೆಲಸ ಮಾಡುತ್ತಿರುವ ಎಲ್ಲ ಸಿಬ್ಬಂದಿಗಳಿಗೂ ತುಂಬು ಹೃದಯದ ಧನ್ಯವಾದಗಳು ತಿಳಿಸಿದರು.
ಬಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರು ಶಾಸಕರಾದ ಶ್ರೀ ಸಿದ್ದು ಸವದಿ, ವಿ.ಡಿ.ಸಿ.ಸಿ ಬ್ಯಾಂಕ್ ವಿಜಯಪುರ ಅಧ್ಯಕ್ಷರಾದ ಶಿವಾನಂದ್ ಪಾಟೀಲ್, ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ರಾಜೇಂದ್ರ ಕುಮಾರ್, ಡಾಕ್ಟರ್ ಆರ್. ಎಂ. ಮಂಜುನಾಥಗೌಡ, ಅಫೆಕ್ಸ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸಿ. ಎನ್. ದೇವರಾಜ್, ಹಾಗೂ ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು
Notice: Undefined variable: post in /home/hosakira/public_html/wp-content/themes/newses/inc/ansar/hooks/hook-single-page.php on line 180