• Tue. Nov 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಉಡುಪಿ : ಪ್ರಧಾನಿ ಕಾರ್ಯಾಲಯದ ಸಂಸದೀಯ ಪ್ರಧಾನಕಾರ್ಯದರ್ಶಿಎಂದು ಸುಳ್ಳು ಹೇಳಿ ಶ್ರೀಕೃಷ್ಣ ಮಠಕ್ಕೆ ಬಂದ ವ್ಯಕ್ತಿ!

ByKiran Poojary

Oct 11, 2024

ಉಡುಪಿ: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅ. 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್‌ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದರು.

ಅನುಮಾನ ವ್ಯಕ್ತವಾಯಿತು ಅದರಂತೆ ಅ. 9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಉದಯ್‌ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಿದ್ದಾರೆ.

ಆದರೆ ಅವರ ಚಲನವಲನದಿಂದ ಅನುಮಾನ ವ್ಯಕ್ತವಾಗಿ ಅವರನ್ನು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್‌ಸೈಟ್‌ ಅನ್ನು ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕವಾದ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಶ್ರೀ ಮಠಕ್ಕೆ ಆಗಮಿಸಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್‌ ನಂದನ್‌ ಅವರು ನೀಡಿದ ದೂರಿನಂತೆ, ಉಡುಪಿ ಠಾಣೆಯಲ್ಲಿ ಅ.ಕ್ರ. 178/2024 ಕಲಂ: 319(2) 318 (4) 350(2) 20 BNS ಆಕ್ಟ್ ನಂತೆ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *