
ಕುಂದಾಪುರ: ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದರಲ್ಲಿ ಕಳ್ಳರು ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಸಂಭವಿಸಿದೆ. ಜಗದೀಶ್ ಚಂದ್ರ ನಾಯರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ
ಗುರುವಾರ ಮಧ್ಯಾಹ್ನ 2 ಗಂಟೆಗೆ ಜಗದೀಶ್ ಚಂದ್ರ ಹಾಗೂ ಪತ್ನಿ ಮನೆಯಲ್ಲಿ ಊಟ ಮಾಡಿ ಪ್ರೆಸ್ ಗೆ ಹೋಗಿದ್ದರು. ಸಂಜೆ 4 ಗಂಟೆಗೆ ಜಗದೀಶ್ ಅವರ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಅನುಮಾನ ಬಂದು ಹಿಂಬದಿ ಹೋಗಿ ನೋಡಿದಾಗ ಮನೆಯ ಹಿಂಬದಿಯ ಬಾಗಿಲು ಒಡೆದು ದರೋಡೆ ನಡೆದ ವಿಚಾರ ಬೆಳಕಿಗೆ ಬಂದಿದೆ. ಕುಂದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.
Leave a Reply